Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ಯಲ್ಲದಕರೆ ಹಾಲಿನ ಡೈರಿ ಪುನಶ್ಚೇತನಕ್ಕೆ ಬಿ.ಸಿ. ಸಂಜೀವಮೂರ್ತಿ ಚಾಲನೆ

---Advertisement---

ಸುದ್ದಿಒನ್, ಹಿರಿಯೂರು, ಜನವರಿ. 01  : ತಾಲ್ಲೂಕಿನ ಯಲ್ಲದಕರೆ ಗ್ರಾಮದಲ್ಲಿ ಕಾರಣಾಂತರಗಳಿಂದ ಸ್ಥಗಿತಗೊಂಡಿದ್ದ ಹಾಲಿನ ಡೈರಿಯ ಪುನಶ್ಚೇತನಕ್ಕೆ ಗುರುವಾರ ಶಿಮುಲ್ ನಿರ್ದೇಶಕ ಬಿಸಿ. ಸಂಜೀವಮೂರ್ತಿ ಚಾಲನೆ ನೀಡಿದರು.

ನಂತರ ಮಾತನಾಡಿದ ನಿರ್ದೇಶಕರು ಪುನಶ್ಚೇತನ ದಿನವೇ ಸುಮಾರು 150 ಕ್ಕೂ ಹೆಚ್ಚು ಲೀಟರ್ ಹಾಲು ಶೇಖರಣೆಯಾಗಿರುವುದು ಸಂತಸ ತಂದಿದೆ. ಹಾಲಿನ ಗುಣಮಟ್ಟ ಹೆಚ್ಚಿಸುವ ಜವಾಬ್ದಾರಿ ರೈತರದ್ದಾಗಿದೆ. ಡೈರಿಗೆ ನೀಡುವ ಹಾಲು ಗುಣಮಟ್ಟ ಇದ್ದಲ್ಲಿ, ಉತ್ಪಾದಕರಿಗೆ ಉತ್ತಮ ಬೆಲೆ ಸಿಗುತ್ತದೆ. ತಾಲ್ಲೂಕಿನಲ್ಲಿ ಹಾಲು ಉತ್ಪಾದಕ ಸಹಕಾರ ಸಂಘಗಳು ಉತ್ತಮವಾಗಿ ನಡೆಯುತ್ತಿದೆ. ಆಡಳಿತ ಮಂಡಳಿ ಉತ್ತಮವಾಗಿ ಕಾರ್ಯನಿರ್ವಹಿಸಿದರೆ ಆ ಸಂಘಗಳು ಅಭಿವೃದ್ದಿ ಹೊಂದಲು ಸಾಧ್ಯ. ಡೇರಿಗಳಲ್ಲಿ ರಾಜಕೀಯಕ್ಕೆ ಅವಕಾಶ ಕಲ್ಪಿಸದೆ ಡೇರಿ ದೇವಾಲಯ ಎಂದು ಭಾವಿಸಿದರೆ ಡೇರಿಯಲ್ಲಿ ಯಾವುದೇ ಅವ್ಯವಹಾರ ನಡೆಯುವುದಿಲ್ಲ ಎಂದರು. ಸಂಘದ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಶಿಮುಲ್ ಒಕ್ಕೂಟದಿಂದ ಸಿಗುವ ಸೌಲಭ್ಯಗಳನ್ನು ಬಳಸಿಕೊಂಡು ಸಂಘವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಚಳ್ಳಕೆರೆ ಉಪವಿಭಾಗಾಧಿಕಾರಿ ಎಂ. ಪುಟ್ಟರಾಜು, ಮಾರ್ಗ ವಿಸ್ತರಣಾಧಿಕಾರಿ ಕೃಷ್ಣಕುಮಾರ್, ಯಲ್ಲಕರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಚಂದ್ರಮ್ಮ, ಉಪಾಧ್ಯಕ್ಷೆ ಲಕ್ಷ್ಮೀದೇವಿ, ಆಡಳಿತ ಮಂಡಳಿಯ ನಿರ್ದೇಶಕರಾದ ತಿಪ್ಪೇಸ್ವಾಮಿ, ಕೃಷ್ಣಮೂರ್ತಿ, ಲಲಿತಮ್ಮ, ಕರಿಯಪ್ಪ , ಚಂದ್ರಮ್ಮ, ರೇಣುಕಮ್ಮ ಸೇರಿದಂತೆ ಮತ್ತಿತರರು ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...