ಚಿತ್ರದುರ್ಗ: ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಮತ್ತೆ ಸಚಿವ ಸ್ಥಾನ ತಪ್ಪಿದೆ ಎನ್ನಲಾಗುತ್ತಿದೆ. ಇದು ಶಾಸಕಿಯ ಬೆಂಬಲಿಗರಿಗೆ ಅಸಮಾಧಾನ ಉಂಟು ಮಾಡಿದೆ. ಈ ಬಾರಿ ಅವರು ಸಚಿವರಾಗಿಯೇ ಆಗ್ತಾರೆ ಅನ್ನೋ ನಂಬಿಕೆ ಇತ್ತು. ಆದ್ರೆ ಕೊನೆ ಗಳಿಗೆಯಲ್ಲಿ ಮತ್ತೆ ನಿರಾಸೆಯಾಗಿದೆ.
ಈ ಬಾರಿಯೂ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಕೈತಪ್ಪುವ ಸಾಧ್ಯತೆ ಇದೆ. ಈ ವಿಚಾರ ತಿಳಿದ ಬೆನ್ನಲ್ಲೇ ಅವರ ಬೆಂಬಲಿಗರು ರಕ್ತ ಚಳುವಳಿ ಮಾಡಿದ್ದಾರೆ. ದಾವಣಗೆರೆಯ ಜಯದೇವ ವೃತ್ತದಲ್ಲಿ ರಕ್ತ ಚಳುವಳಿ ನಡೆಸಿದ್ದಾರೆ.
ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ರಕ್ತದಲ್ಲೇ ಪತ್ರ ಬರೆದಿದ್ದಾರೆ. ಸುಮಾರು 5 ಸಾವಿರ ಜನ ಈ ರಕ್ತ ಚಳುವಳಿಯಲ್ಲಿ ಭಾಗವಹಿಸಿದ್ದರು. ಹಿಂದುಳಿದ ಸಮಾಜಕ್ಕೆ ನ್ಯಾಯ ಸಿಗಲೇಬೇಕು ಎಂದು ಒತ್ತಾಯಿಸಿದ್ದಾರೆ. ಇದೆಲ್ಲಾ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮತ್ತಷ್ಟು ತಲೆ ನೋವು ತರಿಸಿದೆ. ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಈ ಬಾರಿಯೂ ಸಚಿವ ಸ್ಥಾನ ಸಿಗದೇ ಹೋದಲ್ಲಿ, ಅವರ ಬೆಂಬಲಿಗರಿಂದ ಇನ್ಯಾವ ರೀತಿಯ ಹೋರಾಟ ನೋಡಬೇಕಾಗುತ್ತೋ ತಿಳಿಯದು.