ಹಿರಿಯೂರು. ಏಪ್ರಿಲ್.19: ನಗರದ ಟಿ.ಬಿ.ಸರ್ಕಲ್ ನಿಂದ ತಾಲ್ಲೂಕು ಕಚೇರಿವರೆಗಿನ ರಸ್ತೆ ಅಗಲೀಕರಣ ಕಾಮಾಗರಿ ನಿಮಿತ್ತ ಏಪ್ರಿಲ್ 20 ಭಾನುವಾರದಂದು ಬೆಳಿಗ್ಗೆ 10 ಗಂಟೆಯಿಂದ 6 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಹಿರಿಯೂರಿನ ಆವಧಾನಿನಗರ, ತಾಲ್ಲೂಕು ಕಚೇರಿ, ಆಜಾದ್ ನಗರ, ಚಿಕ್ಕಪೇಟೆ, ತೇರುಮಲ್ಲೇಶ್ವರ ದೇವಸ್ಥಾನದ, ಗಾಂಧಿ ವೃತ್ತ, ಹುಳಿಯಾರು ರಸ್ತೆ, ಹರಿಶ್ಚಂದ್ರ ಘಾಟ್, ಲಕ್ಕವನಹಳ್ಳಿ, ದೊಡ್ಡಘಟ್ಟ, ಸೀಗೇಹಟ್ಟಿ, ಕೂನಿಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ. ಗ್ರಾಹಕರು ಸಹರಿಸುವಂತೆ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















