Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇತಿಹಾಸ ಸೃಷ್ಟಿಸಲಿರುವ ಪ್ರಮಾಣವಚನ : ಸರ್ವಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಡಿಕೆಶಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ

---Advertisement---

ಸುದ್ದಿಒನ್,ಬೆಂಗಳೂರು,ಜೂನ್.03 : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಕೆಲವೇ ನಿಮಿಷಗಳಲ್ಲಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಪ್ರಮಾಣವಚನ ಕಾರ್ಯಕ್ರಮಕ್ಕೆ ಸರ್ವಧರ್ಮಗಳ ಸ್ವಾಮೀಜಿಗಳು ಭಾಗಿಯಾಗಿದ್ದಾರೆ.

ಕರ್ನಾಟಕದ ರಾಜಕೀಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಅಪರೂಪದ ಹಾಗೂ ಐತಿಹಾಸಿಕ ಕ್ಷಣವೊಂದಕ್ಕೆ ರಾಜಧಾನಿ ಸಾಕ್ಷಿಯಾಗುತ್ತಿದೆ. ನೂತನ ಮುಖ್ಯಮಂತ್ರಿಯಾಗಿ ನಿಯೋಜನೆಗೊಂಡಿರುವ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ 4.05ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ಅಧಿಕಾರದ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಬಾರಿಯ ಪ್ರಮಾಣವಚನ ಕಾರ್ಯಕ್ರಮದ ವಿಶೇಷತೆಯೆಂದರೆ, ಸರ್ವ ಧರ್ಮಗಳ ಸ್ವಾಮೀಜಿಗಳು ಮತ್ತು ಧರ್ಮಗುರುಗಳ ಸಮ್ಮುಖದಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಗದ್ದುಗೆ ಏರಲಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿ ಈವರೆಗೂ ಎಲ್ಲಾ ಧರ್ಮಗಳ ಸ್ವಾಮೀಜಿಗಳನ್ನು ಏಕಕಾಲದಲ್ಲಿ ಆಹ್ವಾನಿಸಿ, ಅವರ ಸಮ್ಮುಖದಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಯಾವುದೇ ಉದಾಹರಣೆಗಳಿಲ್ಲ. ಹೀಗಾಗಿ ಈ ವಿಶೇಷ ಹೆಜ್ಜೆಯ ಮೂಲಕ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಹೊಸ ಇತಿಹಾಸ ಬರೆಯುತ್ತಿದ್ದಾರೆ.

ಈ ಮಹತ್ವದ ಕಾರ್ಯಕ್ರಮಕ್ಕಾಗಿ ಈಗಾಗಲೇ ರಾಜ್ಯದ ವಿವಿಧ ಭಾಗಗಳ ಎಲ್ಲಾ ಧರ್ಮ, ಜಾತಿ ಹಾಗೂ ಪಂಥಗಳಿಗೆ ಸೇರಿದ ಸುಮಾರು 55ಕ್ಕೂ ಹೆಚ್ಚು ಪ್ರಮುಖ ಸ್ವಾಮೀಜಿಗಳು ಮತ್ತು ಧರ್ಮಗುರುಗಳನ್ನು ಆಹ್ವಾನಿಸಲಾಗಿದೆ. ಆಹ್ವಾನಿತ ಶ್ರೀಗಳು ಈಗಾಗಲೇ ಲೋಕಭವನಕ್ಕೆ ಆಗಮಿಸುತ್ತಿದ್ದಾರೆ.

ರಾಜ್ಯದಲ್ಲಿ ಸರ್ವ ಧರ್ಮ ಸಹಿಷ್ಣುತೆ, ಪರಸ್ಪರ ಸಹಬಾಳ್ವೆ, ಶಾಂತಿ ಮತ್ತು ಸೌಹಾರ್ದತೆಯ ಪ್ರಬಲ ಸಂದೇಶವನ್ನು ಸಾರುವ ಉದ್ದೇಶದಿಂದ ಈ ವಿಶಿಷ್ಟ ಪರಂಪರೆಗೆ ಡಿ.ಕೆ. ಶಿವಕುಮಾರ್ ಮುನ್ನುಡಿ ಬರೆದಿದ್ದಾರೆ ಎನ್ನಲಾಗಿದೆ. ಲೋಕಭವನದ ಸುತ್ತಮುತ್ತ ಈಗಾಗಲೇ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಗಣ್ಯರ ಆಗಮನ ಮುಂದುವರಿದಿದೆ.

Join WhatsApp

Join Now

Join Telegram

Join Now