ಟೀಕೆ ಮಾಡುವ ಭರದಲ್ಲಿ ನಳೀನ್ ಕುಮಾರ್ ಕಟೀಲ್ ಅವರು ಫ್ಯಾಮಿಲಿ ಬಿಸಿನೆಸ್ʼ ಬಗ್ಗೆ ಹೇಳಿದ್ದಾರೆ: ಹೆಚ್ ಕೆ ಕುಮಾರಸ್ವಾಮಿ

suddionenews
1 Min Read

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು RSS ಬಗ್ಗೆ ನೀಡಿದ ಹೇಳಿಕೆಯಿಂದ ನೀವೆಲ್ಲರೂ ಮೈಪರಚಿಕೊಳ್ಳುತ್ತಿರುವುದು ನೋಡಿದರೆ ಸತ್ಯ ಎಷ್ಟು ಕಹಿಯಾಗಿರುತ್ತದೆ ಎಂಬುದು ಅರ್ಥವಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಟೀಕೆ ಮಾಡುವ ಭರದಲ್ಲಿ ನಳೀನ್ ಕುಮಾರ್ ಕಟೀಲ್ ಅವರು ಫ್ಯಾಮಿಲಿ ಬಿಸಿನೆಸ್ʼ ಬಗ್ಗೆ ಹೇಳಿದ್ದಾರೆ.

ಆದರೆ, ನಿಮ್ಮ ಪಕ್ಷದ ಫ್ಯಾಮಿಲಿ ಬಿಸಿನೆಸ್ʼಗೆ ಸಂಘದಲ್ಲಿಯೇ ತರಬೇತಿ ನೀಡಲಾಗುತ್ತಿದೆಯೇ?
ಆಪರೇಷನ್ ಕಮಲದ ಮೂಲಕ ಹೆಚ್.ಡಿ.ಕುಮಾರಸ್ವಾಮಿ ಅವರ ಸರಕಾರವನ್ನು ಕೆಡವಿ ಅಧಿಕಾರಕ್ಕೆ ಬಂದ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಯನ್ನು ಕಣ್ಣೀರಿಡುತ್ತಲೇ ಕಳೆದುಕೊಂಡರು ಯಾಕೆ? ಅದು ಫ್ಯಾಮಿಲಿ ಬಿಸಿನೆಸ್ʼನಿಂದ ಅಲ್ಲವೇ? ನಿಮ್ಮ ಪಕ್ಷದ ಶಾಸಕರೇ ಹಾದಿಬೀದಿಯಲ್ಲಿ ನಿಂತು ನಿಮ್ಮ ಮುಖ್ಯಮಂತ್ರಿಯ ʼಫ್ಯಾಮಿಲಿ ಬಿಸಿನೆಸ್ʼ ಬಗ್ಗೆ ಟೀಕೆ ಮಾಡಿದ್ದನ್ನು ಮರೆತುಬಿಟ್ಟಿರಾ ಕಟೀಲ್ ಅವರೇ? ಅನುಗ್ರಹದ ಹಿತ್ತಲಿನಲ್ಲಿ ನಡೆದ ವ್ಯವಹಾರಗಳ ಬಗ್ಗೆ ಹೇಳಲಿಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ

ಐಎಎಸ್, ಐಪಿಎಸ್ ಅಭ್ಯರ್ಥಿಗಳಿಗೆ ತರಬೇತಿ ಕೊಡುತ್ತಿದ್ದೇವೆ ಎಂದು ಹೇಳುತ್ತಿದ್ದೀರಿ, ಸರಿ. ಸಂಘದ ಸ್ವಯಂಸೇವಕರು ದೇಶ ಸೇವೆ ಮಾಡುತ್ತಿದ್ದಾರೆ ಎನ್ನುತ್ತೀರಿ. ಹಾಗಾದರೆ, ಎಲ್ಲರನ್ನೂ ಗಡಿಗೆ ಕಳಿಸಿ. ಗಡಿಯಲ್ಲಿ ಈಗ ಉದ್ವಿಗ್ನ ಪರಿಸ್ಥಿತಿ ಇದೆ. ಕಟೀಲ್ ಅವರೇ, ಸುಖಾಸುಮ್ಮನೆ ಮಾತನಾಡುವದಲ್ಲ, ಸತ್ಯವನ್ನು ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

Share This Article
Leave a Comment

Leave a Reply

Your email address will not be published. Required fields are marked *