
ಚಿತ್ರದುರ್ಗ,(ಜ.26) : 74ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಗುರುವಾರ ರಾಷ್ಟ್ರಧ್ವಜರೋಹಣ ನೆರವೇರಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು, ದೇಶ ನಮಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ ನಾವು ದೇಶಕ್ಕೆ ಏನು ಕೊಡುಗೆ ಕೊಟ್ಟಿದ್ದೇವೆ ಎಂಬ ಚಿಂತನೆ ಬೇಕು. ಜನರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸರ್ಕಾರದ ಎಲ್ಲ ರೀತಿಯ ಸೌಲಭ್ಯಗಳನ್ನು ವಿಳಂಬವಿಲ್ಲದೆ ತಲುಪಿಸಿದಲ್ಲಿ ಅದೇ ನಾವು ದೇಶಕ್ಕೆ ಕೊಡುವ ಗೌರವ. ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆ, ರಾಜ್ಯ ಹಾಗೂ ದೇಶವನ್ನು ಸದೃಢಗೊಳಿಸುವಲ್ಲಿ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಕೊಡುಗೆ ನೀಡಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಸತೀಶ್ ರೆಡ್ಡಿ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.
GIPHY App Key not set. Please check settings