ಸುದ್ದಿಒನ್, ಚಿತ್ರದುರ್ಗ : ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 8 ಕೋಟಿ ಹಣವನ್ನು ಹೊಳಲ್ಕೆರೆ ಪೊಲೀಸರು ಬುಧವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ.
ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿ ಬಳಿ ಚಿತ್ರದುರ್ಗದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಇನೋವಾ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ವಶಕ್ಕೆ ಪಡೆದು ಚಾಲಕ ಸಚಿನ್ ನನ್ನು ವಿಚಾರಣೆ ನಡೆಸಿದ್ದಾರೆ.
ಅಪರಿಚಿತರು ಪೊಲೀಸರಿಗೆ ದೂರವಾಣಿಯ ಮೂಲಕ ಕರೆ ಮಾಡಿ ಕಾರಿನಲ್ಲಿ ಅಕ್ರಮವಾಗಿ ಹಣ ಸಾಗಣೆ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಮಾಹಿತಿ ಅನ್ವಯ ಹೊಳಲ್ಕೆರೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಾರನ್ನು ಪರಿಶೀಲಿಸಿದಾಗ ಹಣ ಪತ್ತೆಯಾಗಿದೆ.
ಚಿತ್ರದುರ್ಗದ ಉದ್ಯಮಿಯೊಬ್ಬರಿಗೆ ಸೇರಿದ ಹಣ ಇದಾಗಿದ್ದು, ಶಿವಮೊಗ್ಗಕ್ಕೆ ಕಾರಿನಲ್ಲಿ ಸಾಗಿಸಲಾಗುತ್ತಿತ್ತು. ಈ ಕುರಿತು
ಯಾವುದೇ ದೂರು ದಾಖಲಾಗಿಲ್ಲ. ವಿಚಾರಣೆ ಬಳಿಕ ಕೇಸ್ ದಾಖಲಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…