Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಹೊಳಲ್ಕೆರೆ | ಅರೆಹಳ್ಳಿ ಗ್ರಾಪಂ ಪಿಡಿಒ ಲೋಕಾಯುಕ್ತ ಬಲೆಗೆ

---Advertisement---

ಸುದ್ದಿಒನ್, ಹೊಳಲ್ಕೆರೆ, ಸೆಪ್ಟೆಂಬರ್. 10 : ಮನೆ ನಿರ್ಮಾಣ ಮಾಡಲು ಲೈಸೆನ್ಸ್ ಪಡೆಯುವ ಸಲುವಾಗಿ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕೃಷ್ಣಮೂರ್ತಿ

5,000/- ರೂಗಳ ಲಂಚದ ಹಣವನ್ನು ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಹಣದೊಂದಿಗೆ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ನಡೆದಿದೆ.

ಮಂಜಮ್ಮ ಎನ್ನುವವರು ಹೊಳಲ್ಕೆರೆ ಪಟ್ಟಣದ ಶಿವಮೊಗ್ಗ ರಸ್ತೆಯ ಕುಕುವಾಡೇಶ್ವರಿ ದೇವಸ್ಥಾನದ ಹಿಂಭಾಗದಲ್ಲಿ ಜೈಪುರ ಗ್ರಾಮಕ್ಕೆ ಒಳಪಡುವ ಶಿವಕುಮಾರಸ್ವಾಮಿ ಬಡಾವಣೆಯಲ್ಲಿ 30*30 ಅಳತೆಯ ನಿವೇಶನದಲ್ಲಿ ಮನೆ ನಿರ್ಮಾಣ ಮಾಡಲು ಲೈಸೆನ್ಸ್ ಪಡೆಯುವ ಸಲುವಾಗಿ ಅರೇಹಳ್ಳಿ ಗ್ರಾಮ ಪಂಚಾಯ್ತಿಗೆ ಅರ್ಜಿಯನ್ನು ಸಲ್ಲಿಸಿರುತ್ತಾರೆ. ಲೈಸೆನ್ಸ್ ಪಡೆಯುವ ಸಂಬಂಧ ಹಲವಾರು ಬಾರಿ ಅರೇಹಳ್ಳಿ ಗ್ರಾಮ ಪಂಚಾಯ್ತಿ ಕಛೇರಿಗೆ ಹೋಗಿ ಅಲ್ಲಿನ ಪಿ.ಡಿ.ಓ. ಕೃಷ್ಣಮೂರ್ತಿ ಇವರಿಗೆ ವಿಚಾರಿಸಿದಾಗ ಅವರು ಮತ್ತು ಅಲ್ಲಿನ ಅಪರೇಟರ್, ನಾಳೆ ಬನ್ನಿ, ಮುಂದಿನ ವಾರ ಬನ್ನಿ ಎಂದು ಹೇಳಿ ಕಳುಹಿಸುತ್ತಿದ್ದರು. ನಂತರ ಅರೇಹಳ್ಳಿ ಗ್ರಾಮ ಪಂಚಾಯ್ತಿಯ ಅಧ್ಯಕ್ಷರಾದ ಪಾಲೇನಗೌಡ್ರು ಇವರಿಂದ ಹೇಳಿಸಿದರೂ ಸಹಾ ಯಾವುದೇ ಪ್ರಯೋಜನವಾಗಿರುವುದಿಲ್ಲ. ನಂತರ 28-08-2025ರಂದು ಅರೇಹಳ್ಳಿ ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿ ಪಿ.ಡಿ.ಓ. ಕೃಷ್ಣಮೂರ್ತಿ ಇವರನ್ನು ಮತ್ತೊಮ್ಮೆ ವಿಚಾರಿಸಿದಾಗ, ಅವರು ಲೈಸೆನ್ಸ್ ನೀಡಲು ರೂ. 15,000/-ಗಳ ಲಂಚದ ಹಣಕ್ಕಾಗಿ ಬೇಡಿಕೆಯಿಟ್ಟಿರುತ್ತಾರೆ.

ಈ ವಿಚಾರವಾಗಿ ಲಂಚದ ಹಣವನ್ನು ಕೊಟ್ಟು ಮನೆ ನಿರ್ಮಾಣಕ್ಕೆ ಲೈಸೆನ್ಸ್ ಪಡೆದುಕೊಳ್ಳಲು ಇಷ್ಟವಿರದ ಇವರು ಶ್ರೀ ಕೃಷ್ಣಮೂರ್ತಿ, ಪಿ.ಡಿ.ಓ. ಅರೇಹಳ್ಳಿ ಗ್ರಾಮ ಪಂಚಾಯ್ತಿ, ಹೊಳಲ್ಕೆರೆ ತಾ|| ಇವರ ಮೇಲೆ ಲೋಕಾಯುಕ್ತ ಕಚೇರಿಗೆ ದೂರು ನೀಡಿರುತ್ತಾರೆ.

ಈ ದೂರಿನ ಮೇರೆಗೆ ಇಂದು ಜಿ. ಕೃಷ್ಣಮೂರ್ತಿ, ಪಿ.ಡಿ.ಓ., ಅರೇಹಳ್ಳಿ ಗ್ರಾಮ ಪಂಚಾಯ್ತಿ, ಹೊಳಲ್ಕೆರೆ ತಾ, ಚಿತ್ರದುರ್ಗ ಜಿಲ್ಲೆ ಇವರು ತಾನು ಕರ್ತವ್ಯ ನಿರ್ವಹಿಸುತ್ತಿರುವ ಕಛೇರಿಯಲ್ಲಿಯೇ ರೂ.5,000/- ರೂಗಳ ಲಂಚದ ಹಣವನ್ನು ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುತ್ತಾರೆ. ಪ್ರಸ್ತುತ ಅವರನ್ನು ವಶಕ್ಕೆ ಪಡೆದು, ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ಕಛೇರಿಯ ಪೊಲೀಸ್ ಅಧೀಕ್ಷಕರಾದ ಶ್ರೀ ಎನ್. ವಾಸುದೇವರಾಮ ಇವರ ಮಾರ್ಗದರ್ಶನದಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿರುತ್ತದೆ.

ಈ ಸಂದರ್ಭದಲ್ಲಿ ಕರ್ನಾಟಕ ಲೋಕಾಯುಕ್ತ, ಚಿತ್ರದುರ್ಗ ಕಛೇರಿಯ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಎನ್. ಮೃತ್ಯುಂಜಯ ಇವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಟ್ರ್ಯಾಪ್ ಕಾಲಕ್ಕೆ ಚಿತ್ರದುರ್ಗ ಲೋಕಾಯುಕ್ತ ಠಾಣೆಯ ಪೊಲೀಸ್ ನಿರೀಕ್ಷಕರು ಗಳಾದ ಮುಪ್ತಾಕ್ ಅಹ್ಮದ್ ಡಿ. ಶೇಖ್ ಮತ್ತು ಬಸವರಾಜ ಬಿ. ಲಮಾಣಿ ಹಾಗೂ ಸಿಬ್ಬಂದಿಯವರಾದ ಜಿ.ಎಂ. ತಿಪ್ಪೇಸ್ವಾಮಿ, ಶ್ರೀನಿವಾಸ ಹೆಚ್., ಶ್ರೀಮತಿ ಎಸ್.ಆರ್. ಪುಷ್ಪ, ಮಂಜುನಾಥ ಆರ್, ವೀರೇಶ ಎಂ, ಸತೀಶ್ ಎಲ್.ಜಿ., ರಾಜೇಶ್ ಎಸ್, ಮಾರುತಿ ಕೆ.ಟಿ., ವೆಂಕಟೇಶ್‌ಕುಮಾರ್ ಆರ್, ಮಾರುತಿ ಡಿ, ಸಂತೋಷ ಟಿ.ವಿ. ರವರುಗಳು ಹಾಜರಿದ್ದರು.

 

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...