Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕವಾಡಿಗರಹಟ್ಟಿ ಸಂತ್ರಸ್ಥ ಕುಟುಂಬಗಳಿಗೆ ಮನೆ ಮತ್ತು ಉದ್ಯೋಗ : ಸಿಎಂ ಸಿದ್ದರಾಮಯ್ಯ ಭರವಸೆ

---Advertisement---

ಚಿತ್ರದುರ್ಗ,  ಅ 6: ಕಲುಷಿತ ನೀರು ಕುಡಿದು ಆರು ಮಂದಿ ಮೃತಪಟ್ಟಿದ್ದ ಕಾವಾಡಿಗರ ಹಟ್ಟಿಯ ಅಭಿವೃದ್ದಿಗೆ 3 ಎಕರೆ ಜಾಗ 4 ಕೋಟಿ ರೂಪಾಯಿ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಕಲುಷಿತ ನೀರು ಕುಡಿದು ಆರು ಮಂದಿ ಮೃತಪಟ್ಟಿದ್ದ ಕಾವಾಡಿಗರಹಟ್ಟಿಯಲ್ಲಿ ಸಂತ್ರಸ್ಥ ಕುಟುಂಬಗಳ ಬಂಧುಗಳನ್ನು ಮಾತಾಡಿಸಿದ ಬಳಿಕ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಈ ಭರವಸೆ ನೀಡಿದರು.

ಸಂತ್ರಸ್ಥ ಕುಟುಂಬಗಳ ಜವಾಬ್ದಾರಿ ಸರ್ಕಾರ ವಹಿಸಿಕೊಳ್ಳಲಿದೆ. ಈ ಕುಟುಂಬಗಳ ಸದಸ್ಯರಿಗೆ ಉದ್ಯೋಗವನ್ನೂ ಕೊಡುತ್ತೇವೆ. ಮನೆಯನ್ನೂ ಕಟ್ಟಿಸಿಕೊಡುತ್ತೇವೆ ಎಂದರು.

ಶುದ್ದ ಕುಡಿಯುವ ನೀರು ಕೊಡುವುದು ನಮ್ಮ ಕರ್ತವ್ಯ. ಘಟನೆ ಘಟಿಸಿದ ತಕ್ಷಣ ಸ್ಥಳೀಯ ಶಾಸಕರು, ಜಿಲ್ಲಾ ಮಂತ್ರಿಗಳು ಮತ್ತು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದೆ. ತಕ್ಷಣಕ್ಕೆ 10 ಲಕ್ಷ ಪರಿಹಾರ ನೀಡಿದೆವು ಎಂದು ವಿವರಿಸಿದರು.

ಮೊದಲೇ ಶುದ್ದ ನೀರಿನ ವ್ಯವಸ್ಥೆ ಇದ್ದಿದ್ದರೆ ಈ ಅನಾಹುತ ನಡೆಯುತ್ತಿರಲಿಲ್ಲ. ಘಟನೆ ಬಳಿಕ ಶುದ್ದ ಕುಡಿಯುವ ನೀರಿಗೆ ತೊಂದರೆ ಆಗದಂತೆ ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದೆ ಇಂತಹ ಅನಾಹುತ ನಡೆದರೆ ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಖಚಿತ ಎಂದು ಎಚ್ಚರಿಸಿದರು.

ಕೃಷಿ ಸಚಿವ ಚಲುವರಾಯಸ್ವಾಮಿ, ಜಿಲ್ಲಾ ಸವಿವ ಡಿ.ಸುಧಾಕರ್, ಶಾಸಕ ವೀರೇಂದ್ರ ಪಪ್ಪಿ, ಮಾಜಿ ಸಚಿವ ಎಚ್.ಆಂಜನೇಯ ಸೇರಿ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...