ಚಿತ್ರದುರ್ಗ, ಅ 6: ಕಲುಷಿತ ನೀರು ಕುಡಿದು ಆರು ಮಂದಿ ಮೃತಪಟ್ಟಿದ್ದ ಕಾವಾಡಿಗರ ಹಟ್ಟಿಯ ಅಭಿವೃದ್ದಿಗೆ 3 ಎಕರೆ ಜಾಗ 4 ಕೋಟಿ ರೂಪಾಯಿ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಕಲುಷಿತ ನೀರು ಕುಡಿದು ಆರು ಮಂದಿ ಮೃತಪಟ್ಟಿದ್ದ ಕಾವಾಡಿಗರಹಟ್ಟಿಯಲ್ಲಿ ಸಂತ್ರಸ್ಥ ಕುಟುಂಬಗಳ ಬಂಧುಗಳನ್ನು ಮಾತಾಡಿಸಿದ ಬಳಿಕ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಈ ಭರವಸೆ ನೀಡಿದರು.
ಸಂತ್ರಸ್ಥ ಕುಟುಂಬಗಳ ಜವಾಬ್ದಾರಿ ಸರ್ಕಾರ ವಹಿಸಿಕೊಳ್ಳಲಿದೆ. ಈ ಕುಟುಂಬಗಳ ಸದಸ್ಯರಿಗೆ ಉದ್ಯೋಗವನ್ನೂ ಕೊಡುತ್ತೇವೆ. ಮನೆಯನ್ನೂ ಕಟ್ಟಿಸಿಕೊಡುತ್ತೇವೆ ಎಂದರು.
ಶುದ್ದ ಕುಡಿಯುವ ನೀರು ಕೊಡುವುದು ನಮ್ಮ ಕರ್ತವ್ಯ. ಘಟನೆ ಘಟಿಸಿದ ತಕ್ಷಣ ಸ್ಥಳೀಯ ಶಾಸಕರು, ಜಿಲ್ಲಾ ಮಂತ್ರಿಗಳು ಮತ್ತು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದೆ. ತಕ್ಷಣಕ್ಕೆ 10 ಲಕ್ಷ ಪರಿಹಾರ ನೀಡಿದೆವು ಎಂದು ವಿವರಿಸಿದರು.
ಮೊದಲೇ ಶುದ್ದ ನೀರಿನ ವ್ಯವಸ್ಥೆ ಇದ್ದಿದ್ದರೆ ಈ ಅನಾಹುತ ನಡೆಯುತ್ತಿರಲಿಲ್ಲ. ಘಟನೆ ಬಳಿಕ ಶುದ್ದ ಕುಡಿಯುವ ನೀರಿಗೆ ತೊಂದರೆ ಆಗದಂತೆ ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದೆ ಇಂತಹ ಅನಾಹುತ ನಡೆದರೆ ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಖಚಿತ ಎಂದು ಎಚ್ಚರಿಸಿದರು.
ಕೃಷಿ ಸಚಿವ ಚಲುವರಾಯಸ್ವಾಮಿ, ಜಿಲ್ಲಾ ಸವಿವ ಡಿ.ಸುಧಾಕರ್, ಶಾಸಕ ವೀರೇಂದ್ರ ಪಪ್ಪಿ, ಮಾಜಿ ಸಚಿವ ಎಚ್.ಆಂಜನೇಯ ಸೇರಿ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











