Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೇ.19ರಂದು ತುಮಕೂರಿನಲ್ಲಿ `ಪ್ರಗತಿಯತ್ತ ಕರ್ನಾಟಕ’ ಸಮಾವೇಶ: ಸಿಎಂ ಸಿದ್ದರಾಮಯ್ಯಗೆ ಗೃಹ ಸಚಿವ ಜಿ. ಪರಮೇಶ್ವರ್ ಆಹ್ವಾನ

---Advertisement---

ಬೆಂಗಳೂರು: ತುಮಕೂರಿನಲ್ಲಿ ಮೇ 19 ರಂದು ಹಮ್ಮಿಕೊಳ್ಳಲಾಗಿರುವ “ಪ್ರಗತಿಯತ್ತ ಕರ್ನಾಟಕ” ಮೂರು ವರ್ಷಗಳ ಸಾಧನೆ ಹಾಗೂ ಸೇವೆಯ ಸಮರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ.

ಗೃಹ ಸಚಿವರಾದ ಜಿ. ಪರಮೇಶ್ವರ್ ಅವರು ಇಂದು ಮುಖ್ಯಮಂತ್ರಿಗಳನ್ನು ಖುದ್ದಾಗಿ ಭೇಟಿಯಾಗಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಹಸ್ತಾಂತರಿಸಿದರು. ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಈ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ.

ಈ ಸಂದರ್ಭದಲ್ಲಿ ಶಾಸಕರುಗಳಾದ ಜೆ.ಟಿ. ಪಾಟೀಲ್ ಹಾಗೂ ಎ.ಆರ್. ಕೃಷ್ಣಮೂರ್ತಿ ಅವರು ಉಪಸ್ಥಿತರಿದ್ದರು. ಸಮಾವೇಶದ ಸಿದ್ಧತೆಗಳ ಕುರಿತು ಇದೇ ವೇಳೆ ಸಿಎಂ ಅವರೊಂದಿಗೆ ಚರ್ಚಿಸಲಾಯಿತು ಎನ್ನಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now