Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಚಿತ್ರದುರ್ಗಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ : ಕಾರ್ಯಕ್ರಮ ವಿವರ ಇಲ್ಲಿದೆ

ಸಚಿವ ಪರಮೇಶ್ವರ್
---Advertisement---

ಚಿತ್ರದುರ್ಗ ನ. 16 : ರಾಜ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ನ. 17 ರಂದು ಒಂದು ದಿನದ ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು ಬೆ. 10.30 ಗಂಟೆಗೆ ಚಿತ್ರದುರ್ಗ ನಗರಕ್ಕೆ ಆಗಮಿಸುವರು.  ಬೆ. 11 ಗಂಟೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಇಲಾಖಾ ಪ್ರಗತಿ ಪರಿಶೀಲನೆ ಸಭೆ ನಡೆಸುವರು.

ಮದ್ಯಾಹ್ನ 12 ಗಂಟೆಗೆ ಚಿತ್ರದುರ್ಗದ ಬಸವೇಶ್ವರ ನಗರದಲ್ಲಿ ಏರ್ಪಡಿಸಿರುವ 72 ಪೊಲೀಸ್ ವಸತಿ ಗೃಹಗಳ ಉದ್ಘಾಟನೆ, ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ಕಟ್ಟಡ ಉದ್ಘಾಟನೆ ಹಾಗೂ ತಳಕು ಪೊಲೀಸ್ ಠಾಣಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.  ಸಚಿವರು ಅದೇ ದಿನ ಸಂಜೆ 4 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment