Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಸಂಸ್ಕೃತಿ ನೈತಿಕ ಪತನಕ್ಕೆ ಸಾಕ್ಷಿ: ಎಂಎಲ್ಸಿ ಕೆ.ಎಸ್. ನವೀನ್ ಕಳವಳ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

 

ಸುದ್ದಿಒನ್, ಚಿತ್ರದುರ್ಗ ಅ. 18 : ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ‘ಹನಿಟ್ರ್ಯಾಪ್’ ಬಳಸಿ ರಾಜಕೀಯ ನಾಯಕರನ್ನು ಹಾಗೂ ಸಾರ್ವಜನಿಕ ವ್ಯಕ್ತಿಗಳನ್ನು ಬ್ಲ್ಯಾಕ್‍ಮೇಲ್ ಮಾಡುವ ಸಂಸ್ಕೃತಿ ಹೆಚ್ಚುತ್ತಿದ್ದು, ಇದು ಅತ್ಯಂತ ಖಂಡನೀಯ ಹಾಗೂ ರಾಜ್ಯದ ರಾಜಕಾರಣದ ಕೀಳುಮಟ್ಟದ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಕೆ.ಎಸ,ನವೀನ್ ಕಳವಳ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗ ನಗರದಲ್ಲಿ ಭಾನುವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಇಂತಹ ಕೃತ್ಯಗಳಲ್ಲಿ ತೊಡಗಿರುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಇತ್ತೀಚಿನ ವರ್ಷಗಳಲ್ಲಿ ರಾಜ್ಯದಲ್ಲಿ ಕೇಳಿಬರುತ್ತಿರುವ ಹನಿಟ್ರ್ಯಾಪ್ ಪ್ರಕರಣಗಳು ಮತ್ತು ಗುಪ್ತ ಕ್ಯಾಮೆರಾ ಹಾಗೂ ಧ್ವನಿಮುದ್ರಿಕೆಗಳನ್ನು ಬಳಸಿ ವ್ಯಕ್ತಿಗಳನ್ನು ಬ್ಲ್ಯಾಕ್‍ಮೇಲ್ ಮಾಡುವ ಕೃತ್ಯಗಳು ಹೆಚ್ಚಾಗುತ್ತಿವೆ ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಗಳ ವೈಯಕ್ತಿಕ ಬದುಕಿನ ಘಟನೆಗಳನ್ನು ದುರ್ಬಳಕೆ ಮಾಡಿಕೊಂಡು, ಸ್ವಾರ್ಥ ಲಾಭಕ್ಕಾಗಿ ಬ್ಲ್ಯಾಕ್‍ಮೇಲ್ ಮಾಡುವವರು ಸಮಾಜಕ್ಕೆ ಮಾರಕವಾಗಿದ್ದು, ಇಂತಹ ಪ್ರವೃತ್ತಿಯನ್ನು ತಡೆಗಟ್ಟಬೇಕು ಎಂದು ತಿಳಿಸಿದ ಅವರು ಬಿಜೆಪಿ ಅಥವಾ ಇನ್ಯಾವುದೇ ಪಕ್ಷದ ಹೆಸರಾಗಲಿ, ತಪ್ಪಿತಸ್ಥರು ಯಾರೇ ಆಗಿರಲಿ, ಈ ಕುರಿತು ಪಾರದರ್ಶಕ ತನಿಖೆ ನಡೆಸಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ರಾಜಕೀಯದಲ್ಲಿ ಅಧಿಕಾರಕ್ಕೆ ಬರಲು ಅಥವಾ ಜನಪ್ರಿಯತೆ ಗಳಿಸಲು ಜನರ ವಿಶ್ವಾಸ ಗಳಿಸಬೇಕೇ ಹೊರತು, ಇಂತಹ ಕೀಳುಮಟ್ಟದ ಕೃತ್ಯಗಳ ಮೂಲಕ ಎದುರಾಳಿಗಳನ್ನು ಹಣಿಯುವ ರಾಜಕಾರಣ ಸರಿಯಲ್ಲ ರಾಜ್ಯದ ಜನಸಾಮಾನ್ಯರು ಹಲವಾರು ಆರ್ಥಿಕ ಹಾಗೂ ಸಾಮಾಜಿಕ ಕಷ್ಟಗಳನ್ನು ಎದುರಿಸುತ್ತಿದ್ದು, ರಾಜಕೀಯ ಪಕ್ಷಗಳು ಮತ್ತು ನಾಯಕರು ಜನಪರ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕೇ ವಿನಃ ಇಂತಹ ಕ್ಷುಲ್ಲಕ ವಿಚಾರಗಳಲ್ಲ ಎಂದು ಕಿವಿಮಾತು ಹೇಳಿದರು.

ರಾಜ್ಯ ರಾಜಕಾರಣದಲ್ಲಿ ವೈಯಕ್ತಿಕ ಬದುಕನ್ನು ಅಸ್ತ್ರವಾಗಿ ಬಳಸಿ ಬ್ಲ್ಯಾಕ್‍ಮೇಲ್ ಮಾಡುವ ‘ಹನಿಟ್ರ್ಯಾಪ್’ ಸಂಸ್ಕೃತಿಗೆ ಸಂಪೂರ್ಣವಾಗಿ ಕಡಿವಾಣ ಹಾಕಬೇಕು. ತಪ್ಪಿತಸ್ಥರು ಯಾವುದೇ ಪಕ್ಷದವರಾಗಲಿ, ಮುಲಾಜಿಲ್ಲದೆ ನಿಷ್ಪಕ್ಷಪಾತ ತನಿಖೆ ನಡೆಸಿ ಅವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ರಾಜಕಾರಣಿಗಳು ಮತ್ತು ಸಾರ್ವಜನಿಕರು ಜನಪರ ಹಾಗೂ ನೈತಿಕ ಮೌಲ್ಯಯುತ ರಾಜಕಾರಣಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now