ಬೆಂಗಳೂರು; ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಹಗರಣ ದೊಡ್ಡ ಸುದ್ದಿಯಾಗಿದೆ. ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿದ್ದರು ಅವರದ್ದೇ ಪಕ್ಷದ ಸಚಿವರ ಮೇಲೆ ಹನಿಟ್ರ್ಯಾಪ್ ಆಗಿರೋದು ಆಶ್ಚರ್ಯಕ್ಕೆ ಕಾರಣವಾಗಿದೆ. ಈ ಸುದ್ದಿ ವಿಧಾನಸಭೆಯಲ್ಲೂ ಹೆಚ್ಚು ಚರ್ಚೆಯಾದ ಬೆನ್ನಲ್ಲೇ ಇಂದು ದಿಢೀರನೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಬಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಮಂಡಿನೋವಿನ ಸಮಸ್ಯೆ ಇದೆ. ಹೀಗಾಗಿ ಹೆಚ್ಚು ಒತ್ತು ನಿಂತುಕೊಳ್ಳುವುದಕ್ಕ ಆಗಲ್ಲ. ವೀಲ್ ಚೇರ್ ನಲ್ಲಿಯೇ ಓಡಾಟ. ಹೀಗಾಗಿ ಅವರ ಆರೋಗ್ಯ ವಿಚಾರಿಸಲು ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಬಂದಿದ್ದಾರೆ. ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಕೂಡ ಜೊತೆಗಿದ್ದರು. ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಣೆಯ ಜೊತೆಗೆ ರಾಜ್ಯ ರಾಜಕೀಯದ ಬೆಳವಣಿಗೆಯ ಬಗ್ಗೆಯೂ ವಿಚಾರಿಸಿದ್ದಾರೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಕ್ಲೋಸ್ ಡೋರ್ ಮೀಟಿಂಗ್ ಮಾಡಿದ್ದಾರೆ. ಈ ವೇಳೆ ರಾಜ್ಯದಲ್ಲಿ ನಮ್ಮದೇ ಪಕ್ಷ ಅಧಿಕಾರದಲ್ಲಿದ್ದು, ಈ ರೀತಿಯ ಹನಿಟ್ರ್ಯಾಪ್ ಬೆಳವಣಿಗೆ ಒಳ್ಳೆಯದಲ್ಲ ಎಂದು ಉಭಯ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ. ಇನ್ನು ಇದೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹನಿಟ್ರ್ಯಾಪ್ ಬಗ್ಗೆ ಸಿದ್ದರಾಮಯ್ಯ ಅವರು ಸಂಪೂರ್ಣ ಮಾಹಿತಿ ನೀಡಿದ್ದಾರೆ. ರಾಜಕೀಯವಾಗಿ ಮುಗಿಸಲು ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸಲಾಗಿದೆ ಎಂದು ರಾಜಣ್ಣ ಕೂಡ ಹೇಳಿದ್ದಾರೆ ಎನ್ನಲಾಗಿದೆ.
ಇತ್ತೀಚೆಗಷ್ಟೇ ಬಸವರಾಜ್ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇವೆ ಎಂದು ಹೇಳಿದ್ದರು. ಇದೀಗ ಇದ್ದಕ್ಕಿದ್ದ ಹಾಗೇ ಆ ನಿರ್ಧಾರದಿಂದ…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ಪ್ರಕರಣ ದೊಡ್ಡ ಮಟ್ಟದಲ್ಲಿಯೇ ಸದ್ದು ಮಾಡುತ್ತಿದೆ. ಕೆ.ಎನ್.ರಾಜಣ್ಣ ಅವರ ಹೆಸರು ಕೇಳಿ ಬರುತ್ತಿದೆ. ಆದರೆ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಮಾ. 25…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್,…
ಚಳ್ಳಕೆರೆ, ಮಾರ್ಚ್. 25 : ಕಳ್ಳತನದಂತ ಪ್ರಕರಣಗಳು ಸಿನಿಮಾದಲ್ಲಿ ನಡೆದಂತೆ ನಡೆಯುವುದನ್ನು ನೋಡಿದ್ದೇವೆ. ಆದರೆ ದೇವರ ಈಗ ದೇವರ ಆಭರಣಗಳು…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 25 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಮಂಗಳವಾರ, ಮಾರ್ಚ್. 25) ಹತ್ತಿ…