Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ : ಸರ್ಕಾರದಿಂದ ಹೊಸ ಕಾನೂನು ಜಾರಿಗೆ ನಿರ್ಧಾರ..!

---Advertisement---

ಹುಬ್ಬಳ್ಳಿ: ಮಗಳು ಬೇರೆ ಜಾತಿ ಹುಡುಗನನ್ನು ಮದುವೆಯಾಗಿದ್ದಳು ಎಂಬ ಕಾರಣಕ್ಕೆ ಹುಬ್ಬಳ್ಳಿಯಲ್ಲಿ ಸ್ವಂತ ತಂದೆಯೇ ಮಗಳನ್ನ ಕೊಡಲಿಯಿಂದ ಕೊಚ್ಚಿ ಕೊಂದದ್ದು ಗೊತ್ತೆ ಇದೆ. ಅದರಲ್ಲೂ ಕೊಲೆಯಾದ ಮಹಿಳೆ ಏಳು ತಿಂಗಳ ಗರ್ಭಿಣಿ ಕೂಡ ಆಗಿದ್ದರು. ಈ ಕೊಲೆ ಪ್ರಕರಣದ ಬೆನ್ನಲ್ಲೇ ಸರ್ಕಾರ ಹೊಸ ಕಾನೂನು ಜಾರಿಗೆ ತಂದಿದೆ. ಈ ಸಂಬಂಧ ಗಂಭೀರವಾಗಿ ಪರಿಗಣಿಸುವುದಾಗಿ ಸರ್ಕಾರ ತಿಳಿಸಿದೆ.

ಮರ್ಯಾದಾ ಹತ್ಯೆ ವಿರುದ್ಧ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯ ಕೇಳಿ ಬಂದಿತ್ತು. ಈ ಸಂಬಂಧ ವಿವಿಧ ದಲಿತಪರ ಸಂಘಟನೆಗಳು ಆಗ್ರಹಿಸಿದ್ದವು. ಇದೀಗ ರಾಜ್ಯ ಸರ್ಕಾರ ಕೂಡ ಮರ್ಯಾದಾ ಹತ್ಯೆ ವಿರೋಧಿ ಕಾನೂನು ಜಾರಿಗೊಳಿಸುವುದಕ್ಕೆ ಚಿಂತನೆ ನಡೆಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸುಳಿವು ನೀಡಿದ್ದಾರೆ.

ಈ ಸಂಬಂಧ ಮಾತನ್ನಾಡಿರುವ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಮರ್ಯಾದಾ ಹತ್ಯೆ ಕಾನೂನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ಕೇವಲ ಕಾನೂನು ಜಾರಿಗೊಳಿಸಿದರೆ ಸಾಲದು, ಅದನ್ನು ಅನುಷ್ಠಾನಕ್ಕೆ ತರುವ ಕೆಲಸವಾಗಬೇಕು ಎಂಬ ಮಾತನ್ನ ಹೇಳಿದ್ದಾರೆ. ಹುಬ್ಬಳ್ಳಿ ಅಂತ ಅಲ್ಲ, ಸಾಕಷ್ಟು ಜಿಲ್ಲೆಗಳಲ್ಲಿ ಈ ಘಟನೆ ನಡೆದಿದೆ. ಮಗಳು ಬೇರೆ ಜಾತಿ ಯುವಕನನ್ನ ಮದುವೆಯಾದಳು ಎಂಬ ಸಣ್ಣ ಕಾರಣಕ್ಕೆ, ಊರಿಗೆ ಬರಯವ ತನಕ ಕಾದು, ಕೊಲೆ ಮಾಡಿರುವ ಪೋಷಕರು ಇದ್ದಾರೆ. ಒಂದು ವೇಳೆ ಕಠಿಣ ಶಿಕ್ಷೆ ನಿಗಧಿ ಮಾಡಿದರೆ ಈ ರೀತಿಯ ಕ್ರೂರ ಘಟನೆಗಳು ನಡೆಯುವುದು ಕಡಿಮೆಯಾಗುವ ಸಾಧ್ಯತೆ ಇದೆ. ಎಷ್ಟೋ ಜೀವಗಳು ಬದುಕುವ ಸಾಧ್ಯತೆಯೂ ಇದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...