ಕೊರೋನಾ ವಾರಿಯರ್ಸ್‍ಗಳಿಗೆ ಸನ್ಮಾನ

ವರದಿ : ಕೆ.ಎಂ. ಮುತ್ತುಸ್ವಾಮಿ ಕಣ್ಣನ್

ಚಿತ್ರದುರ್ಗ : ಕೋವಿಡ್ ಸಂದರ್ಭದಲ್ಲಿ ಜೀವದ ಹಂಗು ತೊರೆದು ಸಾರ್ವಜನಿಕ ಸೇವೆ ಸಲ್ಲಿಸಿದ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಶುಶ್ರೂಷಕಿಯರು ಹಾಗೂ ಆಯಾಗಳಿಗೆ ಶಿವಶರಣ ಹರಳಯ್ಯ ಮಹಾವೇದಿಕೆ ಹಾಗೂ ಬಿಜೆಪಿ‌ ಬೂತ್ ಕಮಿಟಿಯಿಂದ ನಗರದ ಕೆಳಗೋಟೆ ಬೇಡರಕಣ್ಣಪ್ಪ ದೇವಸ್ಥಾನದ ಸಮೀಪವಿರುವ ಹರಳಯ್ಯ ಸಮುದಾಯ ಭವನದಲ್ಲಿ ಶುಕ್ರವಾರ ಸನ್ಮಾನಿಸಲಾಯಿತು.

ಬಿಜೆಪಿ ಯುವ ಮುಖಂಡ ಡಾ.ಸಿದ್ದಾರ್ಥ ಗುಂಡಾರ್ಪಿ ಮಾತನಾಡಿ ಕೋವಿಡ್‍ನಂತ ಅಪಾಯಕಾರಿ ಸಂದರ್ಭದಲ್ಲಿ ವೈದ್ಯರು, ದಾದಿಯರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಆಯಾಗಳು ಪ್ರಾಣವನ್ನು ಲೆಕ್ಕಿಸದೆ ಕೋವಿಡ್ ಸೋಂಕಿತರ ಸೇವೆ ಮಾಡಿದ್ದಾರೆ. ಇಂತಹವರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ನಿಜಕ್ಕೂ ಅರ್ಥಪೂರ್ಣ ಎಂದು ಹೇಳಿದರು.
ನಗರಸಭೆ ಸದಸ್ಯ ಅಂಗಡಿ ಮಂಜಣ್ಣ ಅಧ್ಯಕ್ಷತೆ ವಹಿಸಿದ್ದರು.

ಬಿಜೆಪಿ.ಬೂತ್ ಅಧ್ಯಕ್ಷ ರಮೇಶ್, ತಾಲ್ಲೂಕು ಅಧ್ಯಕ್ಷ ಪಿ.ರಾಕೇಶ್, ಜಯಣ್ಣ ಸಾಗಲಗಟ್ಟೆ, ಮಾಯಣ್ಣ, ರಘು, ರಾಕೇಶ್ ಪಿ, ಸುಪ್ರೀಂ ಚಕ್ರವರ್ತಿ, ಜೆ.ಮಂಜುನಾಥ್, ಬಸವರಾಜ್, ಶೇಖರ್ ಪಾಳೆಗಾರ್ ಇನ್ನು ಮುಂತಾದವರು ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿದ್ದರು.

 

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

2 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

4 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

4 hours ago