ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ವತಿಯಿಂದ ಪತ್ರಕರ್ತ ಕಣ್ಣನ್ ಹಾಗೂ ವಿತರಕ ನಾಗರಾಜ ಶೆಟ್ಟಿಯವರಿಗೆ ಸನ್ಮಾನ

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 09 : ಪತ್ರಕರ್ತ ಕೆ.ಎಂ.ಮುತ್ತಸ್ವಾಮಿ(ಕಣ್ಣನ್) ಇವರು 35 ವರ್ಷಗಳಿಂದಲೂ ಪತ್ರಿಕೋದ್ಯಮದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವುದನ್ನು ಹಾಗೂ ಸುಮಾರು 25 ವರ್ಷಗಳಿಂದ ಪತ್ರಿಕಾ ವಿತರಕರಾಗಿ ಸೇವೆ ಸಲ್ಲಿಸುತ್ತಿರುವ ಪಿ. ನಾಗರಾಜ ಶೆಟ್ಟಿ ಅವರನ್ನು ಗುರುತಿಸಿ ವಾಸವಿ ಮಹಲ್ ರಸ್ತೆಯಲ್ಲಿರುವ ಕನ್ಯಕಾ ಪರಮೇಶ್ವರಿ ದೇವಸ್ಥಾನದಲ್ಲಿ ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ವತಿಯಿಂದ ಸೋಮವಾರ ಸನ್ಮಾನಿಸಿ ಗೌರವಿಸಲಾಯಿತು.

ವಾಸವಿ ಕ್ಲಬ್ ಫೋರ್ಟ್‍ನಿಂದ ವಿಶ್ವಾದ್ಯಂತ ನಡೆಯುವ ವಾಸವಿ ವೀಕ್ ಡೇ ಕಾರ್ಯಕ್ರಮದ ಅಂಗವಾಗಿ ಗೌರವಿಸಲಾಯಿತು.

ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ಅಧ್ಯಕ್ಷ ಕೋಟೇಶ್ವರ ಗುಪ್ತ ಮಾತನಾಡುತ್ತ ಪತ್ರಿಕೋದ್ಯಮದಲ್ಲಿ ಶಿಸ್ತು ಮತ್ತು ಬದ್ದತೆಯಿಂದ ಕೆಲಸ ಮಾಡುತ್ತಿರುವ ಕೆ.ಎಂ.ಮುತ್ತುಸ್ವಾಮಿ ಎಲ್ಲರಿಗೂ ಚಿರಪರಿಚಿತರು. ಅದೇ ರೀತಿ ನಾಗರಾಜ ಶೆಟ್ಟಿಯವರು ಕೂಡಾ ಪತ್ರಿಕಾ ವಿತರಕರಾಗಿ ಮನೆ ಮನೆಗೂ ಪತ್ರಿಕೆ ಹಂಚುವ ಮೂಲಕ ಚಿರಪರಿಚಿತರು.  ಪತ್ರಿಕೋದ್ಯಮವನ್ನೆ ವೃತ್ತಿಯನ್ನಾಗಿಸಿಕೊಂಡಿರುವ ಇವರ ಸೇವೆ ನಿರಂತರವಾಗಿರಬೇಕಾದರೆ ಕನ್ಯಕಾ ಪರಮೇಶ್ವರಿಯ ಕೃಪೆಯಿರಲಿ ಎಂದು ಹಾರೈಸಿದರು.

ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ಖಜಾಂಚಿ ಸತ್ಯನಾರಾಯಣಗುಪ್ತ ದೊಂತಿ, ಆರ್ಯವೈಶ್ಯ ಸಂಘದ ಸಹ ಕಾರ್ಯದರ್ಶಿ ಕೆ.ಎಸ್.ಮಂಜುನಾಥಶೆಟ್ಟಿ, ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ನಿರ್ದೇಶಕರಾದ ಟಿ.ಎಸ್. ಸುಹಾಸ್, ಹಾಗೂ ಸದಸ್ಯರುಗಳಾದ ಅವಿನಾಶ್, ಚಂದ್ರಮೋಹನ್ ಎಂ.ಎಸ್. ಸಂತೋಷ್, ಜ್ಯೋತಿ ಲಕ್ಷ್ಮಣ್, ಎಸ್.ಪಿ.ಶ್ರೀನಿವಾಸ್ ಇನ್ನಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

Recent Posts

ಬೆಳ್ಳಂಬೆಳಗ್ಗೆ ಚಿತ್ರದುರ್ಗ ಸೇರಿದಂತೆ ಹಲವೆಡೆ ಲೋಕಾಯುಕ್ತರಿಂದ ದಾಳಿ..!

ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…

51 minutes ago

ಇಂದಿನಿಂದ ಬಜೆಟ್ ಅಧಿವೇಶನ ಆರಂಭ

  ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…

2 hours ago

ಯಾವ ವಯಸ್ಸಿನಿಂದ ಮಕ್ಕಳಿಗೆ ಚಹಾ ಅಥವಾ ಕಾಫಿಯನ್ನು ನೀಡಬಹುದು ? ಚಿಕ್ಕ ವಯಸ್ಸಿನಲ್ಲಿ ಕುಡಿಯುವುದು ಅಪಾಯಕಾರಿಯೇ ?

ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…

5 hours ago

ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ

ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…

6 hours ago

ಫೈನಾನ್ಸ್ ಕಿರುಕುಳಕ್ಕೆ ದಾವಣಗೆರೆಯ ಶಿಕ್ಷಕಿ ಆತ್ಮಹತ್ಯೆ ಕೇಸ್ : ಉಲ್ಟಾ ಹೊಡೆದ ಪತಿ..!

ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…

15 hours ago

ಹುತಾತ್ಮರ ದಿನ : ಗಾಂಧೀಜಿಯವರಿಗೆ ಪುಷ್ಪ ನಮನ

ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…

15 hours ago