ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜನವರಿ. 12 : ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹೆಚ್ಚುವರಿ ಪ್ರಭಾರೆ ಸಹಾಯಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಟಿ.ಗುರುನಾಥ್ವರನ್ನು ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ ಸಂಘದಿಂದ ಭಾನುವಾರ ಸನ್ಮಾನಿಸಲಾಯಿತು.
ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಡಿ.ಟಿ.ಗುರುನಾಥ್ರವರಿಗೆ ಮೈಸೂರು ಪೇಟ ತೊಡಿಸಿ ಶಾಲು ಹಾಕಿ ಗೌರವಿಸಲಾಯಿತು.
ಜಿಲ್ಲಾ ಮಾದಿಗ ನೌಕರರ ಸಾಂಸ್ಕøತಿಕ ಸಂಘದ ಗೌರವಾಧ್ಯಕ್ಷ ಕೆ.ಜಿ.ಜಗದೀಶ್, ಜಿಲ್ಲಾಧ್ಯಕ್ಷ ಶ್ರೀನಿವಾಸನ್, ಹಿರಿಯ ಸಲಹೆಗಾರರುಗಳಾದ ರೇವಣಸಿದ್ದಪ್ಪ, ಜಗನ್ನಾಥ್, ಖಜಾಂಚಿ ಮಲ್ಲಿಕಾರ್ಜುನ್, ರುದ್ರಮುನಿ, ದಯಾನಂದ, ಸಿದ್ದಲಿಂಗಮ್ಮ, ಗೌರಮ್ಮ, ಪ್ರಾಂಶುಪಾಲರಾದ ಕೆ.ಹೆಚ್.ರಾಜು, ರೇವಣಸಿದ್ದಪ್ಪ ಸೇರಿದಂತೆ ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.