ಚಿತ್ರದುರ್ಗ: ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಅಂಗವಾಗಿ ಚಿತ್ರದುರ್ಗದಲ್ಲಿ ಸರ್ಕಾರಿ ಹಾಗೂ ಖಾಸಗಿ ರಂಗದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ನೌಕರರಿಗೆ ಸನ್ಮಾನ ಮತ್ತು ಉದ್ಯೋಗಾವಕಾಶ ಕಲ್ಪಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮವು ಇದೇ ಆಗಸ್ಟ್ 20, 2026ರ ಗುರುವಾರ ಸಂಜೆ 4:00 ಗಂಟೆಗೆ ಚಿತ್ರದುರ್ಗದಲ್ಲಿ ಜರುಗಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ನಿವೃತ್ತ ನೌಕರರು ತಮ್ಮ ಹೆಸರನ್ನು ಮುಂಚಿತವಾಗಿಯೇ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ.
ಆಸಕ್ತರು ಹೆಚ್ಚಿನ ವಿವರಗಳಿಗೆ ಹಾಗೂ ಹೆಸರು ನೋಂದಣಿಗಾಗಿ 8618355344 ಅಥವಾ 6362854892 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.











