Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಮಾಜ ಸೇವಕ ಜಿ. ಎಂ. ಲವಕುಮಾರ್ ಅವರಿಗೆ ಗೌರವ ಡಾಕ್ಟರೇಟ್: ಹುಟ್ಟೂರು ಚಿತ್ರಹಳ್ಳಿಯಲ್ಲಿ ಅದ್ಧೂರಿ ಸನ್ಮಾನ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 21  : ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿಯ ಹೆಮ್ಮೆಯ ಪುತ್ರ, ಖ್ಯಾತ ಉದ್ಯಮಿ ಹಾಗೂ ಹೆಸರಾಂತ ಸಮಾಜ ಸೇವಕ ಜಿ. ಎಂ. ಲವಕುಮಾರ್ ಅವರಿಗೆ ಪ್ರತಿಷ್ಠಿತ ‘ಗೌರವ ಡಾಕ್ಟರೇಟ್’ ಲಭಿಸಿದೆ.

ಸಮಾಜಮುಖಿ ಚಿಂತನೆಗಳೊಂದಿಗೆ ನಿರಂತರವಾಗಿ ನಿಸ್ವಾರ್ಥ ಕಾಯಕದಲ್ಲಿ ತೊಡಗಿಸಿಕೊಂಡಿರುವ ಇವರ ಜನಪರ ಸೇವೆಯನ್ನು ಗುರುತಿಸಿ ‘ದಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ಅಂಡ್ ರಿಸರ್ಚ್ ಯೂನಿವರ್ಸಿಟಿ’ ಈ ಗೌರವವನ್ನು ನೀಡಿ ಪುರಸ್ಕರಿಸಿದೆ. ಪಾಂಡಿಚೇರಿಯ ಹೋಟೆಲ್ ಅಣ್ಣಾಮಲೈ ಇಂಟರ್ನ್ಯಾಷನಲ್ನಲ್ಲಿ ಅದ್ಧೂರಿಯಾಗಿ ಆಯೋಜಿಸಲಾಗಿದ್ದ ವಾರ್ಷಿಕ ‘ಗೋಲ್ಡನ್ ಐಕಾನಿಕ್ ಅವಾರ್ಡ್ಸ್’ ಸಮಾರಂಭದಲ್ಲಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಗೌರವ ಡಾಕ್ಟರೇಟ್ ಪುರಸ್ಕೃತರಾಗಿ ಆಗಮಿಸಿದ ಡಾ. ಜಿ. ಎಂ. ಲವಕುಮಾರ್ ಅವರನ್ನು ಅವರ ಹುಟ್ಟೂರಾದ ಚಿತ್ರಹಳ್ಳಿಯಲ್ಲಿ ಗ್ರಾಮಸ್ಥರು ಅತ್ಯಂತ ಪ್ರೀತಿ ಹಾಗೂ ಆದರದಿಂದ ಬರಮಾಡಿಕೊಂಡರು. ಗ್ರಾಮದ ಆಂಜನೇಯ ಸ್ವಾಮಿ ದೇವಾಲಯದ ಕಮಿಟಿ, ಭಜನಾ ಮಂಡಳಿ, ಸ್ನೇಹಿತರು, ಕುಲಬಾಂಧವರು ಹಾಗೂ ಗ್ರಾಮಸ್ಥರೆಲ್ಲರೂ ಒಗ್ಗೂಡಿ ಅವರನ್ನು ಭವ್ಯವಾಗಿ ಸನ್ಮಾನಿಸಿ, ಹಾರೈಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now