ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.31 : ಎಂ.ಕಾಂ. ಪದವಿಯಲ್ಲಿ ಪ್ರಥಮ ರ್ಯಾಂಕ್ ಗಳಿಸಿ ಮೂರು ಚಿನ್ನದ ಪದಕ ಹಾಗೂ ಎರಡು ನಗದು ಬಹುಮಾನವನ್ನು ಮೈಸೂರು ವಿಶ್ವವಿದ್ಯಾನಿಲಯದ 103 ನೇ ಘಟಿಕೋತ್ಸವದಲ್ಲಿ ಕುಲಪತಿಗಳಿಂದ ಸ್ವೀಕರಿಸಿದ ಚಿತ್ರದುರ್ಗದ ಸಿ.ಎಂ.ಚೈತನ್ಯ ಇವರನ್ನು ಚಂದ್ರವಳ್ಳಿ ವಾಯುವಿಹಾರಿಗಳ ಬಳಗದಿಂದ ಸನ್ಮಾನಿಸಲಾಯಿತು.
ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಮಹಿಳಾ ಕಾಲೇಜಿನ ವಾಣಿಜ್ಯಶಾಸ್ತ್ರ ಸಹ ಪ್ರಾಧ್ಯಾಪಕ ಡಾ.ಸಿ.ಚನ್ನಕೇಶವ ಹಾಗೂ ಮಾಳಪ್ಪನಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಪಿ.ಕೆ.ಮಂಜುಳಾ ಇವರ ಪುತ್ರಿ ಚೈತನ್ಯ 2019-20 ನೇ ಸಾಲಿನಲ್ಲಿ ಬಿ.ಕಾಂ. ಪದವಿಯಲ್ಲೂ ದಾವಣಗೆರೆ ವಿಶ್ವವಿದ್ಯಾನಿಲಯದಿಂದ ಪ್ರಥಮ ರ್ಯಾಂಕ್‍ನೊಂದಿಗೆ ಎರಡು ಚಿನ್ನದ ಪದಕ ಪಡೆದಿದ್ದರೆಂದು ಚಂದ್ರವಳ್ಳಿ ವಾಯುವಿಹಾರಿಗಳ ಬಳಗದವರು ಮೆಚ್ಚುಗೆ ವ್ಯಕ್ತಪಡಿಸಿದರು.
ಡಾ.ಸಿ.ಚನ್ನಕೇಶವ, ಫೈಲ್ವಾನ್ ತಿಪ್ಪೇಸ್ವಾಮಿ, ಮಹಮದಣ್ಣ, ಶಿಕ್ಷಕ ಕೆಂಚವೀರಪ್ಪ, ಚಿತ್ರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುನೀತಮ್ಮ, ಡಾ.ಪ್ರಭಾಕರ್, ಎಸ್.ಎನ್.ರವಿಕುಮಾರ್, ಡಾ.ಸಂಜೀವಕುಮಾರ್‍ಪೋತೆ, ಷಣ್ಮುಖಪ್ಪ, ರಂಗಣ್ಣ, ವಿಜಯಕುಮಾರ್, ರಾಜು, ಮಂಜು, ನಿವೃತ್ತ ಮುಖ್ಯ ಶಿಕ್ಷಕ ಯಲ್ಲಪ್ಪರೆಡ್ಡಿ, ಪಾಪು ಸನ್ಮಾನ ಸಮಾರಂಭದಲ್ಲಿ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












