ಮೈಸೂರಿನಲ್ಲಿ ಗಂಡನಿಂದಲೇ ನಟಿ ಹಾಗೂ ಕಾಂಗ್ರೆಸ್ ಮುಖಂಡೆಯ ಭೀಕರ ಹತ್ಯೆ..!

1 Min Read

ಕನ್ನಡದ ಕೆಲ ಸಿನಿಮಾಗಳಲ್ಲು ನಟಿಸಿದ್ದ, ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದ ವಿದ್ಯಾ ನಂದೀಶ್ ಅವರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ತಲೆಗೆ ಬಲವಾಗಿ ಆಯುಧದಿಂದ ಹೊಡೆದು ಕೊಲೆ ಮಾಡಲಾಗಿದೆ. ಸದ್ಯ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

ವಿದ್ಯಾ ಪರಿ ನಂದೀಶ್ ಈ ಕೊಲೆಯನ್ನು ಮಾಡಿರುವುದು. ಮೈಸೂರಿನ ಶ್ರೀರಾಮಪುರದಲ್ಲಿ ಪತಿ ಹಾಗೂ ಮಕ್ಕಳ ಜೊತೆಗೆ ವಾಸವಾಗಿದ್ದರು. ಬನ್ನೂರಿನ ತುರಗನೂರಿನಲ್ಲಿರುವ ಪತಿಯ ಮನೆಗೆ ತೆರಳಿದ್ದರು. ಈ ವೇಳೆ ಇಬ್ಬರ ನಡುವೆ ಜಗಳವಾಗಿದೆ. ಇದು ವಿಕೋಪಕ್ಕೆ ತಿರುಗಿ ವಿದ್ಯಾರ ಕೊಲೆಯಲ್ಲಿ ಅಂತ್ಯವಾಗಿದೆ. ಆದರೆ ಕೊಲೆಗೆ ನಿರ್ದಿಷ್ಟವಾದ ಕಾರಣ ಏನೆಂಬುದು ಮಾತ್ರ ತಿಳಿದಿಲ್ಲ. ಪತಿ ನಂದೀಶ್ ಈ ಕೊಲೆ‌ ಮಾಡಿ ಪರಾರಿಯಾಗಿದ್ದಾನೆ. ಬನ್ನೂರು ಪೊಲೀಸರು ಸ್ಥಳಕ್ಕೆ ಬಂದು ಮಹಜರು ನಡೆಸಿ, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಹಾಗೂ ಹೆಚ್ಚುವರಿ ಎಸ್ಪಿ ಡಾ. ನಂದಿನಿ ಸೇರಿದಂತೆ ಹಲವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ವಿದ್ಯಾ ನಂದೀಶ್ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದರು. ಶಿವರಾಜ್ ಕುಮಾರ್ ನಟನೆಯ ಭಜರಂಗಿ ಹಾಗೂ ಚಿರಂಜೀವಿ ಸರ್ಜಾ ನಟನೆಯ ಅಜಿತ್ ಚಿತ್ರದಲ್ಲಿಯೂ ನಟಿಸಿದ್ದರು. ಅದಷ್ಟೇ ಅಲ್ಲದೆ ಕಾಂಗ್ರೆಸ್ ಪಕ್ಷದಲ್ಲೂ ಗುರುತಿಸಿಕೊಂಡಿದ್ದರು. ಬ್ಲಾಕ್ ಪಕ್ಷದ ಅಧ್ಯಕ್ಷೆಯಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ಈಕೆಯ ಪತಿ ನಂದೀಶ್ ಸಮಾಜ ಸೇವೆ ಮಾಡುವ ಮೂಲಕ ಆ ಭಾಗದಲ್ಲಿ ಒಳ್ಳೆಯ ಹೆಸರು ಮಾಡಿದ್ದರು. ಆದರೆ ಗಂಡ ಹೆಂಡತಿ‌ ನಡುವೆ ಆಗಾಗ ಜಗಳ ನಡೆಯುತ್ತಲೇ ಇದ್ದ ಕಾರಣ ಇದೀಗ ಕೊಲೆಯಲ್ಲಿ ಅಂತ್ಯವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *