ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯ ಅಯೋಧ್ಯಾ ನಗರದಲ್ಲಿ ಇಂದು ಬೆಳಿಗ್ಗೆ ಭೀಕರ ಅಡುಗೆ ಅನಿಲಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ಸಿಲಿಂಡರ್ ಸ್ಪೋಟದಲ್ಲಿ ಮೃತರನ್ನು ಪ್ರವೀಣ್ ಕಲಾಲ್ ಹಾಗೂ ಮೋಹನ್ ಕಲಾಲ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಸುಮನ್ ಕಲಾಲ್ ಎಂಬ ಮಹಿಳೆಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಮನೆಯಲ್ಲಿ ಅಡುಗೆ ಅನಿಲ ಸೋರಿಕೆಯಾಗಿದ್ದೇ ಈ ದುರಂತಕ್ಕೆ ಪ್ರಾಥಮಿಕ ಕಾರಣ ಎಂದು ಶಂಕಿಸಲಾಗಿದೆ.. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.











