Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮದುವೆ ಸಮಾರಂಭದಲ್ಲಿ ಭೀಕರ ಅಗ್ನಿ ಅವಘಡ: 22 ಮಂದಿ ಸಜೀವ ದಹನ

---Advertisement---

ಕಿನ್ಶಾಸಾ: ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ರಾಜಧಾನಿ ಕಿನ್ಶಾಸಾದಲ್ಲಿ ಮದುವೆ ಸಮಾರಂಭವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 22 ಮಂದಿ ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ.

ಕಿನ್ಶಾಸಾದ ಉತ್ತರ ಭಾಗದಲ್ಲಿರುವ ಲಿಂಗ್ವಾಲಾ ಪ್ರದೇಶದ ಕಟ್ಟಡವೊಂದರಲ್ಲಿ ಶುಕ್ರವಾರ ತಡರಾತ್ರಿ ಈ ದುರಂತ ಸಂಭವಿಸಿದೆ. ಶನಿವಾರ ಮುಂಜಾನೆವರೆಗೂ ಕಟ್ಟಡದಲ್ಲಿ ಬೆಂಕಿ ಉರಿಯುತ್ತಿತ್ತು ಎಂದು ವರದಿಯಾಗಿದೆ.

ಮದುವೆ ಸಮಾರಂಭ ನಡೆಯುತ್ತಿದ್ದ ಕಟ್ಟಡದ ಪ್ರವೇಶ ದ್ವಾರಗಳು ಕಿರಿದಾಗಿದ್ದವು ಎನ್ನಲಾಗಿದ್ದು, ಬೆಂಕಿ ವೇಗವಾಗಿ ಹರಡಿದ ಪರಿಣಾಮ ಒಳಗಿದ್ದವರಿಗೆ ಹೊರಬರಲು ಸಾಧ್ಯವಾಗಲಿಲ್ಲ. ಘಟನೆಯ ಬಳಿಕ ಹಲವರ ಮೃತದೇಹಗಳು ಹಾಗೂ ಗಾಯಾಳುಗಳು ರಸ್ತೆಯ ಬದಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರು ಬದುಕುಳಿದವರನ್ನು ರಕ್ಷಿಸಲು ಮುಂದಾದರು.

ಅಗ್ನಿ ಅವಘಡಕ್ಕೆ ಕಾರಣ ನಿಗೂಢ

ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಕಿನ್ಶಾಸಾದ ಜನನಿಬಿಡ ಪ್ರದೇಶಗಳಲ್ಲಿ ಸೂಕ್ತ ಅಗ್ನಿಶಾಮಕ ಮೂಲಸೌಕರ್ಯಗಳ ಕೊರತೆಯಿಂದ ಇಂತಹ ಅವಘಡಗಳು ಸಂಭವಿಸುತ್ತಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ವಿಶೇಷವಾಗಿ ಬೇಸಿಗೆ ಅವಧಿಯಲ್ಲಿ ನಗರದಲ್ಲಿ ಅಗ್ನಿ ಅವಘಡಗಳ ಸಂಖ್ಯೆ ಹೆಚ್ಚಾಗುತ್ತದೆ ಎನ್ನಲಾಗಿದ್ದು, ಅಧಿಕಾರಿಗಳು ಘಟನೆಯ ಕಾರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

Join WhatsApp

Join Now

Join Telegram

Join Now