Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪರಿಶ್ರಮದಿಂದ ತೋಟಗಾರಿಕೆ, ಕೃಷಿ ಹೆಚ್ಚು ಲಾಭದಾಯಕ : ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

Facebook
Twitter
Telegram
WhatsApp

 

ಚಿತ್ರದುರ್ಗ, ಆಗಸ್ಟ್.08: ಹೆಚ್ಚಿನ ಪರಿಶ್ರಮ ಪಟ್ಟರೆ ಕೃಷಿ ಹಾಗೂ ತೋಟಗಾರಿಕೆಯನ್ನು ಲಾಭದಾಯಕವಾಗಿಸ ಬಹುದಾಗಿದ್ದು, ನೌಕರಿಗಿಂತಲೂ ಹೆಚ್ಚು ಆದಾಯ ಗಳಿಕೆ ಮಾಡಲು ಸಾಧ್ಯವಿದೆ. ಜತೆಗೆ ಇದೊಂದು ದೇಶಸೇವೆಯೂ ಆಗಲಿದೆ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ತೋಟಗಾರಿಕೆ ಇಲಾಖೆ ಸಭಾಂಗಣದಲ್ಲಿ ಗುರುವಾರ ತೋಟಗಾರಿಕೆ ಇಲಾಖೆ ವತಿಯಿಂದ ತೋಟಗಾರಿಕೆ ಪಿತಾಮಹಾ ದಿ. ಡಾ. ಎಂ.ಹೆಚ್.ಮರಿಗೌಡರ ಜನ್ಮದಿನದ ಅಂಗವಾಗಿ ತೋಟಗಾರಿಕೆ ದಿನಾಚರಣೆ ಹಾಗೂ 2024-25ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ತೋಟಗಾರಿಕೆ ವಿಸ್ತರಣೆ ಮತ್ತು ತರಬೇತಿ ಕಾರ್ಯಕ್ರಮದಡಿ ಶಾಲಾ ಮಕ್ಕಳಿಗೆ ತೋಟಗಾರಿಕೆ ಬಗ್ಗೆ ಏರ್ಪಡಿಸಿದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ವಿದ್ಯಾರ್ಥಿಗಳಿಗೆ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ಹಾಗೂ ರೈತರ ಶ್ರಮದ ಬಗ್ಗೆ ಮಾಹಿತಿಯ ಕೊರತೆ ಇದೆ. ನಾವು ತಿನ್ನುವ ಆಹಾರ, ಹಣ್ಣು, ತರಕಾರಿ ಬೆಳೆಗಳನ್ನು ಯಾವ ರೀತಿಯಾಗಿ ಬೆಳೆಯುತ್ತಿದ್ದೇವೆ ಎಂಬುವುದರ  ಕುರಿತು ವಿದ್ಯಾರ್ಥಿಗಳಿಗೆ ಪ್ರಾಥಮಿಕ ಜ್ಞಾನ ಅತ್ಯವಶ್ಯಕವಾಗಿ ಬೇಕಾಗಿದೆ.  ಈ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಗೆ ತೋಟಗಾರಿಕೆ ಬಗ್ಗೆ ತರಬೇತಿ ನೀಡಲಾಗುತ್ತಿದ್ದು, ಇದು ವಿದ್ಯಾರ್ಥಿಗಳಿಗೆ ಅತ್ಯಗತ್ಯವಾಗಿದೆ.  ಹೆಚ್ಚಿನ ಗಮನಹರಿಸಿ ತರಬೇತಿ ಕಾರ್ಯಕ್ರಮದ ಸದುಪಯೋಗವನ್ನು ವಿದ್ಯಾರ್ಥಿಗಳು ಸದ್ಭಳಕೆ ಮಾಡಿಕೊಳ್ಳಬೇಕು. ತೋಟಗಾರಿಕೆ ಬಗ್ಗೆ ತರಬೇತಿ ಪಡೆಯುವ ಮೂಲಕ ತಮಗೆ ಬೇಕಾಗಿರುವ ಹಣ್ಣು, ತರಕಾರಿಗಳನ್ನು ತಾವೇ ಬೆಳೆದುಕೊಳ್ಳಲು ಮುಂದಾಗಬೇಕು ಎಂದರು.

ತೋಟಗಾರಿಕೆ ಪಿತಾಮಹಾ ದಿ.ಡಾ.ಎಂ.ಹೆಚ್.ಮರಿಗೌಡರು ತೋಟಗಾರಿಕೆ ಅಭಿವೃದ್ಧಿಗೆ ಅಪಾರವಾದ ಕೊಡುಗೆ ನೀಡಿದ್ದಾರೆ. ಸಾಧನೆ ಮಾಡಿರುವ ಸಾಧಕರನ್ನು ಆದರ್ಶವಾಗಿಟ್ಟುಕೊಂಡು ತಾವುಗಳು ಸಹ ಸಮಾಜಕ್ಕೆ ಉತ್ತಮವಾದ ಕೊಡುಗೆಯನ್ನು ನೀಡುವಂತಾಗಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶರಣಪ್ಪ ಭೋಗಿ ಮಾತನಾಡಿ, ತೋಟಗಾರಿಕೆ ಪಿತಾಮಹಾ ಡಾ.ಎಂ.ಹೆಚ್.ಮರಿಗೌಡರ ಜನ್ಮ ದಿನಾಚರಣೆ ಅಂಗವಾಗಿ ತೋಟಗಾರಿಕ ದಿನ ಆಚರಣೆ ಮಾಡಲಾಗುತ್ತಿದೆ. ತೋಟಗಾರಿಕೆ ದಿನದ ಅಂಗಗಾಗಿ ಶಾಲಾ ಮಕ್ಕಳಿಗೆ ಕಿಚನ್ ಗಾರ್ಡನ್ ಮಾಡುವ ಬಗೆ, ಮನೆಯ ಅಕ್ಕಪಕ್ಕ ಹಣ್ಣಿನ ಗಿಡಗಳನ್ನು ಬೆಳೆಯುವ ಪದ್ಧತಿ ಬಗ್ಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ತರಬೇತಿ ನಂತರ ಶಾಲಾ ಮಕ್ಕಳಿಗೆ ವಿವಿಧ ಬಗೆಯ ತರಕಾರಿ ಬೆಳೆಗಳ ಬೀಜದ ಕಿಟ್‍ನ್ನು ವಿತರಣೆ ಮಾಡಲಾಗುವುದು ಎಂದರು.
ಮಾರುಕಟ್ಟೆಯಲ್ಲಿ ಸಿಗುವ ಹಣ್ಣು, ತರಕಾರಿಗಳು ಸಾಕಷ್ಟು ರಾಸಾಯನಿಕಗಳಿಂದ ಕೂಡಿದ್ದು, ಕೆಲವು ರಾಸಾಯನಿಕಗಳು ಆರೋಗ್ಯಕ್ಕೆ ಹಾನಿಕಾರಕವಾಗಿವೆ. ಹಾಗಾಗಿ ನಮ್ಮ ಮನೆಗೆ ಬೇಕಾದ ಹಣ್ಣು, ತರಕಾರಿಗಳನ್ನು ಬೆಳೆದು ಜನರು ಉತ್ತಮ ಆರೋಗ್ಯ, ಪೌಷ್ಠಿಕ ವೃದ್ಧಿ ಮಾಡುವ ಉದ್ದೇಶದಿಂದ ಶಾಲಾ ಮಕ್ಕಳಿಗೆ ತರಬೇತಿ ನೀಡಲಾಗುತ್ತಿದೆ ಎಂದರು.

ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ದೇವರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ ಡಾ.ಎಂ.ಹೆಚ್.ಮರಿಗೌಡರ ಸಾಧನೆ ಕುರಿತು ಸವಿವರವಾಗಿ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ತರಕಾರಿ, ಹಣ್ಣು ಬೀಜಗಳ ಕಿಟ್‍ನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು. ನಂತರ ತೋಟಗಾರಿಕೆ ಆವರಣದಲ್ಲಿ ಗಿಡನೆಟ್ಟು ನೀರೆರೆದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್, ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ನಗರಸಭೆ ಸದಸ್ಯ ವೆಂಕಟೇಶ್, ಕೆಡಿಪಿ ಸದಸ್ಯ ನಾಗರಾಜ್ ಸೇರಿದಂತೆ ತೋಟಗಾರಿಕೆ ಇಲಾಖೆ ಸಿಬ್ಬಂದಿ ಹಾಗೂ ಶಾಲಾ ವಿದ್ಯಾರ್ಥಿಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!