ಸುದ್ದಿಒನ್, ಹೊಸದುರ್ಗ, ಮೇ. 17 : ಬೆಲಗೂರು ಗ್ರಾಮದಲ್ಲಿ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಂಪುರ ಪೊಲೀಸರು ಇಬ್ಬರು ಕಳ್ಳರನ್ನು ಬಂಧಿಸಿ ಅವರಿಂದ ಸುಮಾರು 6 ಲಕ್ಷ ರೂಪಾಯಿ ಮೌಲ್ಯದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಬೀರೂರಿನ ಲೋಹಿತ್ ಮತ್ತು ಅಜ್ಜಂಪುರದ ಅರುಣ ಬಂಧಿತರು. ಇವರಿಂದ 4.50.000/- ರೂ ಬೆಲೆಬಾಳುವ ಅಶೋಕ ಲೈಲ್ಯಾಂಡ್ ಗೂಡ್ಸ್ ವಾಹನ, 50.000/- ರೂ. ಬೆಲೆಬಾಳುವ ಎರಡು , 50.000/- ಬೈಕ್ ಹಾಗು 60.000/- ರೂ ನಗದು ಹಣ ಸೇರಿದಂತೆ ಒಟ್ಟು- 6.10.000/- ರೂಪಾಯಿ ವಶಪಡಿಸಿಕೊಳ್ಳಲಾಗಿದೆ.
ಘಟನೆ ಹಿನ್ನೆಲೆ :
ದಿನಾಂಕ-19.04.2026 ರಾತ್ರಿ ಸಮಯದಲ್ಲಿ ಬೆಲಗೂರು ಗ್ರಾಮದ ವರವಂಜಿ ರಸ್ತೆಯಲ್ಲಿ ಬಿಎಸ್‌ಎನ್‌ಎಲ್ ಟವರ್ ಹತ್ತಿರ ನಿಲ್ಲಿಸಿದ್ದ ಅಶೋಕ ಲೈಲ್ಯಾಂಡ್ ಗೂಡ್ಸ್ ವಾಹನ ಕಳುವಾದ ಬಗ್ಗೆ ಮತ್ತು ದಿನಾಂಕ:-02.05.2026 ರಂದು ಬೆಲಗೂರು ಗ್ರಾಮದಲ್ಲಿ ರೇವಣ್ಣಸಿದ್ದೇಶ್ವರ ಸಮುದಾಯ ಭವನದ ಬಳಿ ನಿಲ್ಲಿಸಿದ್ದ ಅಶೋಕ ಲೈಲ್ಯಾಂಡ್ ಗೂಡ್ಸ್ ವಾಹನ ಕಳುವಾದ ಬಗ್ಗೆ ದೂರು ದಾಖಲಾಗಿರುತ್ತದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಎಸ್.ಪಿ. ರಂಜಿತ್ ಕುಮಾರ್ ಬಂಡಾರು ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ.ಶಿವಕುಮಾರ್, ಶಿವಕುಮಾರ್ ಟಿ. ಎಂ ಡಿ.ವೈ.ಎಸ್.ಪಿ , ಶ್ರೀರಾಂಪುರ ಪೊಲೀಸ್ ನಿರೀಕ್ಷಕರಾದ ಗೋಪಾಲನಾಯ್ಕ ಎಂ, ಸಿಬ್ಬಂದಿಗಳ ತಂಡವನ್ನು ರಚಿಸಿದ್ದರು. ಖಚಿತವಾದ ಮಾಹಿತಿ ಮೇರೆಗೆ ಇಂದು ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಎಸ್.ಪಿ. ರಂಜಿತ್ ಕುಮಾರ್ ಬಂಡಾರು ಅವರು ಶ್ರೀರಾಂಪುರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರನ್ನು ಪ್ರಶಂಶಿಸಿರುತ್ತಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















