ಸುದ್ದಿಒನ್, ಹೊಸದುರ್ಗ, ಮಾರ್ಚ್. 25 : ರೈತರು ಸಾಲಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಮುಂದಿನ ಕ್ರಮಕೈಗೊಳ್ಳಲು 15000 ರೂಪಾಯಿ ಲಂಚ ಪಡೆಯುತ್ತಿದ್ದ ಹೊಸದುರ್ಗ ಡಿ.ಸಿ.ಸಿ. ಬ್ಯಾಂಕ್‌ನ ಮೇಲ್ವಿಚಾರಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ನವೀನ್ ಬಂಧಿತ ಆರೋಪಿ. ಮಾಡದಕೆರೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ. ಕುಮಾರ್ ಇವರು ರೈತರುಗಳು ಸಾಲಕ್ಕಾಗಿ ಕೋರಿ ಸಲ್ಲಿಸುವ ಅರ್ಜಿಗಳನ್ನು ಹೊಸದುರ್ಗ ಶಾಖೆಗೆ ಪರಿಶೀಲನೆಗಾಗಿ ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಮೇಲ್ವಿಚಾರಕ ನವೀನ್ ಅವರು ರೂ.15,000/-ಗಳ ಲಂಚದ ಹಣಕ್ಕಾಗಿ ಬೇಡಿಕೆಯಿಟ್ಟಿರುತ್ತಾರೆ. ಅವರು ಲಂಚದ ಹಣಕ್ಕೆ ಬೇಡಿಕೆಯಿಟ್ಟ ಸಮಯದಲ್ಲಿ ನಡೆದ ಸಂಭಾಷಣೆಗಳನ್ನು ತಮ್ಮ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡು ಲೋಕಾಯುಕ್ತ ಪೊಲೀಸ್ ತನಿಖಾಧಿಕಾರಿಗಳಾದ ಬಸವರಾಜ ಬಿ. ಲಮಾಣಿ ಅವರಿಗೆ ದೂರು ಸಲ್ಲಿಸಿರುತ್ತಾರೆ. ಈ ದೂರಿನ ಮೇರೆಗೆ ಇಂದು ದಾಳಿ ಮಾಡಿದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ದಾಳಿ ಮಾಡಿ ಡಿಸಿಸಿ ಬ್ಯಾಂಕಿನ ಮೇಲ್ವಿಚಾರಕ ನವೀನ್ ಅವರನ್ನು ಬಂಧಿಸಿರುತ್ತಾರೆ.


