ಹೊಸದುರ್ಗ | ಕೃಷಿ ಹೊಂಡದಲ್ಲಿ ಬಿದ್ದು ವೈದ್ಯ ಸಾವು..!

ಸುದ್ದಿಒನ್, ಹೊಸದುರ್ಗ, ಮಾರ್ಚ್. 07 : ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ವೈದ್ಯರೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ. 53 ವರ್ಷದ ವೈದ್ಯರಾದ ಜಯರಾಂ ಎಂಬುವವರು ಸಾವನ್ನಪ್ಪಿದ್ದಾರೆ. ಅವರ ಸಾವಿನಿಂದ ಕುಟುಂಬದವರೆಲ್ಲಾ ಆಘಾತದಲ್ಲಿದ್ದಾರೆ.

ಡಾ.ಜಯರಾಂ ಅವರು ಹೊಸದುರ್ಗದಲ್ಲಿ ಖ್ಯಾತ ವೈದ್ಯರಾಗಿದ್ದರು. ಅಲ್ಲಿಯೇ ತಮ್ಮ ತೋಟವನ್ನ ಮಾಡಿಕೊಂಡಿದ್ದರು. ಪ್ರತಿದಿನ ತೋಟಕ್ಕೆ ಭೇಟಿ ಕೊಟ್ಟು ಬರ್ತಾ ಇದ್ರು. ಅದರಂತೆ ಇಂದು ಕೂಡ ತೋಟಕ್ಕೆ ಹೋಗಿದ್ದರು. ಆದರೆ ತೋಟದಲ್ಲಿ ಕೃಷಿ ಹೊಂಡದ ಸಮೀಪಕ್ಕೆ ಹೋದಾಗ, ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾರೆ. ಮೇಲೆ ಬರಲು ಪ್ರಯತ್ನಿಸಿದರು ದುರಾದೃಷ್ಟವಶಾತ್ ಬರುವುದಕ್ಕೆ ಸಾಧ್ಯವಾಗಿಲ್ಲ. ಕೃಷಿ ಹೊಂಡದಲ್ಲಿಯೇ ಬಿದ್ದು ಸಾವನ್ನಪ್ಪಿದ್ದಾರೆ‌.

ವೈದ್ಯರಾಗಿದ್ದರು ಕೂಡ ಪತ್ರಕರ್ತ ವೃತ್ತಿಯನ್ನು ಮಾಡುತ್ತಿದ್ದರು. 2024ರಿಂದ ಗ್ಯಾರಂಟಿ‌ನ್ಯೂಸ್ ಚಾನೆಲ್ ನಲ್ಲಿ ಪತ್ರಕರ್ತರಾಗಿದ್ದರು. ಅದಕ್ಕೂ ಮುನ್ನ ಹಲವು ನ್ಯೂಸ್ ಚಾನೆಲ್ ಗಳಲ್ಲಿ ಮೂರು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ ಅಂತರಾಷ್ಟ್ರೀಯ ವಿಚಾರಗಳ ವಿಶ್ಲೇಷಣೆ ಮಾಡುವ ಬರಹಗಳನ್ನ ಬರೆಯುತ್ತಿದ್ದರು. ಜಯರಾಂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನ ಪಡೆದಿದ್ದರು. ಕನ್ನಡ ಸಾಹಿತ್ಯದ ಬಗ್ಗೆ ಅಪಾರವಾದ ಆಸಕ್ತಿ‌ ಇತ್ತು. ಆದರೀಗ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಶೀಲನೆ ನಡೆಸಿದ್ದಾರೆ.

suddionenews

Recent Posts

ಹಿರಿಯೂರು ಬಳಿ ಉಪ ಸಭಾಪತಿಗೆ ಬೈಕ್ ಡಿಕ್ಕಿ : ಪ್ರಾಣಾಪಾಯದಿಂದ ಪಾರು

ಸುದ್ದಿಒನ್, ಹಿರಿಯೂರು, ಮಾರ್ಚ್. 14 : ತಾಲ್ಲೂಕಿನ ಜವಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಉಪ ಸಭಾಪತಿ ರುದ್ರಪ್ಪ ಲಮಾಣಿಯವರು…

8 hours ago

ದೊಣ್ಣೆಹಳ್ಳಿಯಲ್ಲಿ ಮಾರ್ಚ್ 22 ಮತ್ತು 23 ರಂದು ಉಚಿತ ದಂತ ಪಂಕ್ತಿ ಜೋಡಣಾ ಶಿಬಿರ

  ಸುದ್ದಿಒನ್, ಜಗಳೂರು, ಮಾರ್ಚ್. 14 : ಶ್ರೀ ಶರಣ ಬಸವೇಶ್ವರ ದಾಸೋಹ ಮಠ, ದೊಣ್ಣೆಹಳ್ಳಿ, ಸರ್ಕಾರಿ ದಂತ ಕಾಲೇಜು…

9 hours ago

ಬಾಲಕಿ ಮೇಲೆ ಅತ್ಯಾಚಾರ : ಪೋಕ್ಸೋ ಕಾಯಿದೆಯಡಿ ಕಠಿಣ ಶಿಕ್ಷೆ ವಿಧಿಸಿ : ಕರುನಾಡ ವಿಜಯಸೇನೆ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

11 hours ago

ಮಾ.17 ರಂದು ದೊಣ್ಣೆಹಳ್ಳಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

11 hours ago

ಮಾರ್ಚ್ 16ರಂದು ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ

ಚಿತ್ರದುರ್ಗ. ಮಾ.14: ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆಯ ದೊಡ್ಡ ರಥೋತ್ಸವ ಇದೇ ಮಾರ್ಚ್ 16 ರಂದು ಭಾನುವಾರ…

12 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಮಾರ್ಚ್‌. 14 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ,ಮಾರ್ಚ್. 14: ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)…

12 hours ago