ಸುದ್ದಿಒನ್, ಹೊಸದುರ್ಗ, ಆಗಸ್ಟ್. 07 : ಜಿಲ್ಲಾ ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅವರು ಇಂದು ಶುಕ್ರವಾರ ಹೊಸದುರ್ಗ ತಾಲ್ಲೂಕಿನ ಆಗಲಕೆರೆ ಹಾಗೂ ಕಲ್ಕರೆ ಗ್ರಾಮದ ರೈತರ ಜಮೀನಿಗೆ ಭೇಟಿ ನೀಡಿ ಬೆಳೆಗಳನ್ನು ವೀಕ್ಷಿಸಿದರು. ನಂತರ ಹೊಸದುರ್ಗ ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ವಿಪತ್ತು ನಿರ್ವಹಣೆ ವಿಷಯಗಳ ಸಭೆ ನಡೆಸಿದರು.
ಈ ವೇಳೆ ಹೊಸದುರ್ಗ ಶಾಸಕ ಹಾಗೂ ರಾಜ್ಯ ಆಹಾರ ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣಗಂಜಿಗಟ್ಟೆ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಉಪವಿಭಾಗಾಧಿಕಾರಿ ಕಾಂತರಾಜ್, ಜಿ.ಪಂ.ಉಪಕಾರ್ಯದರ್ಶಿ ಬಾಬು,
ಕೃಷಿ ಜಂಟಿ ನಿರ್ದೇಶಕ ಮಂಜುನಾಥ್, ತೋಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಸವಿತಾ, ಪಶು ಪಾಲನೆ ಹಾಗೂ ವೈದ್ಯಕೀಯ ಇಲಾಖೆ ಉಪನಿರ್ದೇಶಕ ತಿಪ್ಪೇಸ್ವಾಮಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯ ಪಾಲಕ ಅಭಿಯಂತರ ಅಮರನಾಥ್ ಜೈನ್,ಹೊಸದುರ್ಗ ತಹಶಿಲ್ದಾರ ತಿರುಪತಿ ಪಾಟೀಲ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.










