Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹೊಸದುರ್ಗ: ಭದ್ರಾ ಮೇಲ್ದಂಡೆ ಕಾಲುವೆ ಒಡೆದ ಕಿಡಿಗೇಡಿಗಳು : 50 ಲಕ್ಷ ರೂ. ನಷ್ಟ, ದೂರು ದಾಖಲು

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 19 : ಭದ್ರಾ ಮೇಲ್ದಂಡೆ ಯೋಜನೆಯಡಿ ಪ್ರಾಯೋಗಿಕವಾಗಿ ಹರಿಸಲಾಗುತ್ತಿದ್ದ ನೀರನ್ನು ಅಕ್ರಮವಾಗಿ ಪಡೆಯುವ ದುರುದ್ದೇಶದಿಂದ ಕಿಡಿಗೇಡಿಗಳು ಚಿತ್ರದುರ್ಗ ಶಾಖಾ ಕಾಲುವೆಯನ್ನು ಹಾನಿ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಮಾಡದಕೆರೆ ಹೋಬಳಿ ವ್ಯಾಪ್ತಿಯಲ್ಲಿ ನಡೆದಿದೆ.

ಮಾಡದಕೆರೆ ಹೋಬಳಿಯ ಲಕ್ಕಿಹಳ್ಳಿ ಗ್ರಾಮದಿಂದ ಸುಮಾರು 9 ಕಿ.ಮೀ ದೂರದಲ್ಲಿರುವ ಅರಣ್ಯ ಪ್ರದೇಶದ ರಿ.ಸರ್ವೆ ನಂ: 161, ಚೈನೇಜ್ 79.00 ಕಿ.ಮೀ ಹಾದು ಹೋಗಿರುವ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆ ಹಾದು ಹೋಗಿದ್ದು, ದಿನಾಂಕ:16.09.2026ರಂದು ರಾತ್ರಿ ವೇಳೆಯಲ್ಲಿ ಸದರಿ ಕಾಲುವೆಯನ್ನು ಕೆಲವು ಕಿಡಿಗೇಡಿಗಳು ನೀರು ಹರಿಯುತ್ತಿರುವ ಕಾಲುವೆಯನ್ನು ಧ್ವಂಸಗೊಳಿಸಿ. ಕಾಲುವೆಯಲ್ಲಿ ಹರಿಯುತ್ತಿದ್ದ ಸುಮಾರು ಪ್ರಮಾಣದ ನೀರು ಪೋಲಾಗಿದ್ದು. ಕಾಲುವೆಗೆ ಸಂಬಂಧಿಸಿದಂತೆ ಸುಮಾರು 50 ಲಕ್ಷ ರೂ. ನಷ್ಟ ಉಂಟಾಗಿರುತ್ತದೆ.

ಈ ಬಗ್ಗೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ಪ್ರವೀಣ್ ಕುಮಾರ್ ಜಿ.ಎಸ್. ಸಹಾಯಕ ಇಂಜನಿಯರ್, ಭದ್ರಾ ಮೇಲ್ದಂಡೆ ಯೋಜನೆ ಉಪವಿಭಾಗ, ಹಿರಿಯೂರು ಇವರು ನೀಡಿದ ದೂರಿನ ಮೇರೆಗೆ ಹೊಸದುರ್ಗ ಠಾಣೆ .:511/2026, 326(1), 324(4)(5) 2.2.2.-2023, ಕಲಂ 55 ಕರ್ನಾಟಕ ಇರಿಗೇಷನ್ ಆಕ್ಟ್-1965 ಮತ್ತು ಕಲಂ 3 ಪ್ರಿವೆನ್ನನ್ ಆಫ್ ಡ್ಯಾಮೇಜ್ ಟು ಪಬ್ಲಿಕ್ ಪ್ರಾಪರ್ಟಿ ಆಕ್ಟ್-1984 ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತದೆ. ಸದರಿ ನೀರು ಹರಿಯುವ ಕಾಲುವೆಯನ್ನು ಧ್ವಂಸಗೊಳಿಸಿದ ಆರೋಪಿಗಳನ್ನು ಪತ್ತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now