ಸುದ್ದಿಒನ್, ಹೊಸದುರ್ಗ, ಅಕ್ಟೋಬರ್. 15 : ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಚಿತ್ರದುರ್ಗ ಮತ್ತು ಜಿಲ್ಲಾ ತಂಬಾಕು ನಿಯಂತ್ರಣಧಿಕಾರಿಗಳು, ಚಿತ್ರದುರ್ಗ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು, ಹೊಸದುರ್ಗ ಇವರ ಮಾರ್ಗದರ್ಶನ ಮತ್ತು ಸೂಚನೆ ಮೇರೆಗೆ ಗುರುವಾರ (ಅ. 15) ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ಜಾಗೃತಿ ಮೂಡಿಸಿದರು
ಹೊಸದುರ್ಗ ತಾಲ್ಲೂಕಿನ ಮಲ್ಲಪ್ಪನಹಳ್ಳಿ ಮತ್ತು ಬಾಗೂರಿನಲ್ಲಿ ತಂಬಾಕು ಉತ್ಪನ್ನಗಳ ಮಾರಾಟಗಾರರ ಮೇಲೆ ದಾಳಿಯನ್ನು ಕೈಗೊಂಡು ತಂಬಾಕು ಉತ್ಪನ್ನಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ COTPA-2003 ರ ಕಾಯ್ದೆ ಬಗ್ಗೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ಜಾಗೃತಿ ಮೂಡಿಸಿ ಕಲಂ -4 ರ ಅಡಿಯಲ್ಲಿ 20 ಪ್ರಕರಣಗಳು ಮತ್ತು ಕಲಂ 6ಎ ಅಡಿಯಲ್ಲಿ 15 ಪ್ರಕರಣಗಳನ್ನು ದಾಖಲಿಸಿ ರೂ. 2600/- ದಂಡ ವಸೂಲಿಮಾಡಲಾಯಿತು.
ಈ ಸಂದರ್ಭದಲ್ಲಿ ಪ್ರಭುದೇವ ಬಿ. ಎಂ, ಜಿಲ್ಲಾ ಸಲಹೆಗರಾರು, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಚಿತ್ರದುರ್ಗ, ಶ್ರೀನಿವಾಸ ಮಳಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ತಾಲ್ಲೂಕ ಆರೋಗ್ಯಾಧಿಕಾರಿಗಳ ಕಚೇರಿ, ಹೊಸದುರ್ಗ ಮತ್ತು ವಿಶ್ವ ಸಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಜಿಲ್ಲಾ ಸರ್ವೇಕ್ಷಣ ಘಟಕ, ಚಿತ್ರದುರ್ಗ, ತಿಪ್ಪೇಸ್ವಾಮಿ ಕೆ. ಎಂ, ಸಮಾಜ ಕಾರ್ಯಕರ್ತರು, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಚಿತ್ರದುರ್ಗ ಇವರು ಭಾಗವಹಿಸಿದ್ದರು.











