ಹೊಸದುರ್ಗ : ಫೆ.24 ರಂದು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಚಾಲನೆ

1 Min Read

ಚಿತ್ರದುರ್ಗ.‌ ಫೆ.21: 2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಫೆ.24ರಂದು ಹೊಸದುರ್ಗ ತಾಲ್ಲೂಕಿನ ವಿವಿಧ ಖರೀದಿ ಕೇಂದ್ರಗಳಲ್ಲಿ ಚಾಲನೆ ದೊರೆಯಲಿದೆ.

 

ಹೊಸದುರ್ಗ ಶಾಸಕರು ಹಾಗೂ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ ಅವರು ಖರೀದಿ ಪ್ರಕ್ರಿಯೆಯನ್ನು ಉದ್ಘಾಟಿಸುವರು. ಅಂದು ಬೆಳಿಗ್ಗೆ 10ಕ್ಕೆ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ ರಾಗಿ ಖರೀದಿ ಕೇಂದ್ರದಲ್ಲಿ ರಾಗಿ ಖರೀದಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ಮಧ್ಯಾಹ್ನ 12ಕ್ಕೆ  ಶ್ರೀರಾಂಪುರದ ದುರ್ಗದ ಸಿರಿಧಾನ್ಯ ರೈತ ಉತ್ಪಾದಕರ ಕಂಪನಿಯಲ್ಲಿ “ಸಾವೆ” ಖರೀದಿ ಕೇಂದ್ರ ಉದ್ಘಾಟಿಸಲಾಗುವುದು. ನಂತರ ಮಧ್ಯಾಹ್ನ 1.30ಕ್ಕೆ ಹೊಸದುರ್ಗದ ಎ.ಪಿ.ಎಂ.ಸಿ ಯಾರ್ಡ್ ಮತ್ತು ಟಿ.ಎ.ಪಿ.ಸಿ.ಎಂ.ಎಸ್ ಕೇಂದ್ರಗಳಲ್ಲಿ ರಾಗಿ ಖರೀದಿ ಪ್ರಕ್ರಿಯೆಗೆ ಶಾಸಕರು ಚಾಲನೆ ನೀಡಲಿದ್ದಾರೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Enable Notifications OK No thanks