Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಸ್ಪತ್ರೆಯು ಬಾಕಿ ಬಿಲ್ ಗಾಗಿ ಮೃತದೇಹ ತಡೆಯುವಂತಿಲ್ಲ : ಖಾಸಗಿ ಆಸ್ಪತ್ರೆಗಳಿಗೆ ಸಚಿವ ಯು.ಟಿ.ಖಾದರ್ ಎಚ್ಚರಿಕೆ

---Advertisement---

ಬೆಂಗಳೂರು: ಆಸ್ಪತ್ರೆಯ ಬಾಕಿ ಬಿಲ್ ಪಾವತಿಯಾಗಿಲ್ಲ ಎಂಬ ಕಾರಣಕ್ಕೆ ಯಾವುದೇ ಆಸ್ಪತ್ರೆ ಮೃತದೇಹವನ್ನು ತಡೆಹಿಡಿಯಬಾರದು, ಈ ಕುರಿತು ಶೀಘ್ರದಲ್ಲೇ ಸ್ಪಷ್ಟ ನೀತಿಯೊಂದನ್ನು ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.

ಜನಸಾಮಾನ್ಯರ ಮೇಲಿನ ವೈದ್ಯಕೀಯ ವೆಚ್ಚದ ಹೊರೆಯನ್ನು ತಗ್ಗಿಸುವ ಉದ್ದೇಶದಿಂದ ನಗರದ ಆರೋಗ್ಯ ಸೌಧದಲ್ಲಿ ಖಾಸಗಿ ಆಸ್ಪತ್ರೆಗಳ ಒಕ್ಕೂಟದೊಂದಿಗೆ ಮಹತ್ವದ ಸಭೆ ನಡೆಸಲಾಯಿತು. ಸಭೆಯ ಬಳಿಕ ಮಾತನಾಡಿದ ಅವರು, “ಸರ್ಕಾರಕ್ಕೆ ಜನಸಾಮಾನ್ಯರ ಹಿತವೇ ಮೊದಲ ಆದ್ಯತೆಯಾಗಿದ್ದು, ಯಾವುದೇ ಆಸ್ಪತ್ರೆಗಳು ರೋಗಿಗಳ ಮೇಲೆ ವಿಪರೀತ ಶುಲ್ಕದ ಹೊರೆ ಹೇರಬಾರದು” ಎಂದು ಎಚ್ಚರಿಕೆ ನೀಡಿದರು.

ಜೀವರಕ್ಷಕ ಔಷಧಗಳ ದರ ನಿಯಂತ್ರಣ: ಕ್ಯಾನ್ಸರ್, ಹೃದಯ ಮತ್ತು ಕಿಡ್ನಿ ಕಾಯಿಲೆಗಳಿಗೆ ಬಳಸುವ ದುಬಾರಿ ಜೀವರಕ್ಷಕ ಔಷಧಗಳ ದರವನ್ನು ಕಡಿಮೆ ಮಾಡುವ ಹಾಗೂ ಅನಧಿಕೃತ ಎಂಆರ್‌ಪಿ (MRP) ಹೆಚ್ಚಳಕ್ಕೆ ಕಡಿವಾಣ ಹಾಕುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಈ ಸಂಬಂಧ ಮುಂದಿನ ದಿನಗಳಲ್ಲಿ ಔಷಧ ತಯಾರಕರು ಮತ್ತು ವಿತರಕರ ಜತೆ ಪ್ರತ್ಯೇಕ ಸಭೆ ನಡೆಸಲು ತೀರ್ಮಾನಿಸಲಾಗಿದೆ.

ವಿಮಾ ಕಂಪನಿಗಳ ಜತೆ ಸಭೆ: ಆರೋಗ್ಯ ವಿಮೆ ಹೊಂದಿರುವ ರೋಗಿಗಳಿಗೆ ಆಸ್ಪತ್ರೆಗಳು ಹೆಚ್ಚುವರಿ ಶುಲ್ಕ ವಿಧಿಸುವುದನ್ನು ತಪ್ಪಿಸಲು ಮತ್ತು ವಿಮಾ ಕ್ಲೇಮ್ ಪ್ರಕ್ರಿಯೆಯನ್ನು ಸುಲಭಗೊಳಿಸಲು ಶೀಘ್ರದಲ್ಲೇ ವಿಮಾ ಕಂಪನಿಗಳೊಂದಿಗೆ ಮಹತ್ವದ ಸಭೆ ಕರೆಯಲಾಗುವುದು.

ಆಸ್ಪತ್ರೆಗಳ ಸಮಸ್ಯೆಗಳಿಗೆ ಪರಿಹಾರ: ಅಗ್ನಿಶಾಮಕ ಇಲಾಖೆಯ ಸುರಕ್ಷತಾ ನಿಯಮಗಳು, ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿಗಳು ಹಾಗೂ ಕೆಪಿಎಂಇ (KPME) ಕಾಯ್ದೆಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಭೆಯಲ್ಲಿ ಮನವಿ ಸ್ವೀಕರಿಸಲಾಗಿದ್ದು, ಶೀಘ್ರ ಪರಿಹಾರ ಕಲ್ಪಿಸುವ ಭರವಸೆ ನೀಡಲಾಗಿದೆ.

ಖಾಸಗಿ ಆಸ್ಪತ್ರೆಗಳ ಅತಿಯಾದ ಶುಲ್ಕ ವಸೂಲಿ ನಿಯಂತ್ರಿಸುವ ಸಂಬಂಧ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕಠಿಣ ತೀರ್ಮಾನ ಕೈಗೊಳ್ಳಲಾಗುವುದು. ರೋಗಿಗಳಿಗೆ ಕಿರುಕುಳ ಅಥವಾ ವಂಚನೆಯಾಗದಂತೆ ಸಂಪೂರ್ಣ ಪಾರದರ್ಶಕ ವ್ಯವಸ್ಥೆ ರೂಪಿಸಲು ಸರ್ಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು.

Join WhatsApp

Join Now

Join Telegram

Join Now