Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮನೆ ಬೀಗ ಮುರಿದು ಆಭರಣ ಮತ್ತು ನಗದು ಕಳ್ಳತನ

---Advertisement---

 

ಕುರುಗೋಡು. ಡಿ.2 : ಸಮೀಪದ ಮಣ್ಣೂರು- ಸೂಗೂರು ಗ್ರಾಮದ ಮಟ್ಟಿ ವ್ಯಾಪ್ತಿಯಲ್ಲಿನ ಸ್ಥಳೀಯ ಚಾಗಿ ವೀರೇಶ ಗೌಡ ಇವರ ಮನೆಯಲ್ಲಿ ತಡರಾತ್ರಿ ವೇಳೆಯಲ್ಲಿ ಕಳ್ಳತನ ನಡೆದಿದ್ದು, ಈ ಕುರಿತಂತೆ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ದಾಖಲುಗೊಂಡಿದೆ.

ಶನಿವಾರ ಬೆಳಗಿನ ಜಾವ ಒಂದು ಗಂಟೆಯಿಂದ ನಾಲ್ಕು ಗಂಟೆಯ ಮಧ್ಯೆ ಘಟನೆ ಜರುಗಿದ್ದು, ಬೀಗ ಹಾಕಿದ ಮನೆಯ ಚಿಲಕವನ್ನು ಮುರಿದು ಗೋದ್ರೆಜ್ ತೆಗೆದು ಅದರಲ್ಲಿನ ಬಂಗಾರದ ಆಭರಣಗಳು, ಬೆಳ್ಳಿಯ ಆಭರಣಗಳು ಮತ್ತು ನಗದು ಹಣವನ್ನು ದೋಚಿದ್ದಾರೆ.

ಬಂಗಾರದ ಆಭರಣಗಳಾದ ಕತ್ತಿನ ಸರ, ನೆಕ್ಲೆಸ್, ಉಂಗುರಗಳು, ಎಳೆ ಸರಗಳು, ಕೈ ಚೈನಿಗಳು,ಕಿವಿಯ ಆಭರಣಗಳು, ಸರಗಳು ಸೇರಿದಂತೆ ಕಾಲು ಚೈನೆಗಳು ಹಾಗೂ ಇನ್ನಿತರ ಒಟ್ಟು 19 ತೊಲೆ ಬಂಗಾರ ಮತ್ತು ಹದಿನೈದು ತೊಲೆ ಬೆಳ್ಳಿ ಹಾಗೂ 4,80,000 ನಗದು ಹಣವನ್ನು ಕಳ್ಳರು ದೋಚಿದ್ದಾರೆ.

ಸುದ್ದಿ ತಿಳಿಯುತ್ತಲೇ ಪೋಲಿಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಶ್ವಾನದ ಮತ್ತು ಬೆರಳಚ್ಚು ತಜ್ಞರನ್ನು ಕರೆಸಿ, ಮಾಹಿತಿ ಸಂಗ್ರಹಿಸಿದ್ದಾರೆ.

ಈ ಸಂಬಂಧವಾಗಿ ಸಿರಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment