Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪರಿಷ್ಕರಣೆ ಹೆಸರಿನಲ್ಲಿ ಮತದಾನವನ್ನು ಕಸಿದುಕೊಳ್ಳುವುದಾದರೆ ಪ್ರಜಾಪ್ರಭುತ್ವ ಉಳಿಯುವುದಾದರೂ ಹೇಗೆ ? ಜೆ.ಯಾದವರೆಡ್ಡಿ ಆಕ್ರೋಶ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 29 : ಮತ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಚುನಾವಣಾ ಆಯೋಗ ಅಧಿಕಾರ ಹೊಂದಿರುವುದನ್ನು ಸುಪ್ರಿಂಕೋರ್ಟ್ ಎತ್ತಿಹಿಡಿದಿರುವುದು ಸ್ವಾಗತಾರ್ಹ. ಆದರೆ ಸಣ್ಣ ಸಣ್ಣ ಕಾರಣಗಳನ್ನು ಹುಡುಕಿ ಅರ್ಹ ಮತದಾರರನ್ನು ಮತಪಟ್ಟಿಯಿಂದ ಹೊರ ಹಾಕುವುದು ಯಾವ ನ್ಯಾಯ ಎಂದು ಎದ್ದೇಳು ಕರ್ನಾಟಕ ಜಿಲ್ಲಾ ಸಂಚಾಲಕ ಜೆ.ಯಾವರೆಡ್ಡಿ ಪ್ರಶ್ನಿಸಿದರು.?

 

ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮತ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಈ ಹಿಂದೆಯೂ ಇತ್ತು. ಹೊಸದೇನಲ್ಲ. 324 ನೇ ವಿಧಿ ಅನ್ವಯ ಪರಿಷ್ಕರಣೆಗೆ ಚುನಾವಣಾ ಆಯೋಗಕ್ಕೆ ಅಧಿಕಾರವಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. 1952 ರಲ್ಲಿ ಪ್ರಥಮ ಬಾರಿಗೆ ಸಾರ್ವತ್ರಿಕ ಚುನಾವಣೆ ನಡೆದಾಗ 17 ಕೋಟಿ ಎಂಬತ್ತು ಲಕ್ಷ ಮತದಾರರಿಗೆ ಮತದಾನಕ್ಕೆ ಅವಕಾಶ ಕೊಟ್ಟಿತ್ತು. ಏಳು ಬಾರಿ ಪರಿಷ್ಕರಣೆ ನಡೆದಾಗಲು ವಿಶೇಷ ಅಂತಿರಲಿಲ್ಲ. ಹದಿನೆಂಟು ವರ್ಷವಾಗಿರುವವರನ್ನು ಮತದಾರರ ಪಟ್ಟಿಗೆ ಸೇರಿಸುವುದು. ಮೃತರ ಹೆಸರನ್ನು ಡಿಲಿಟ್ ಮಾಡುವುದು ಪದ್ದತಿ. ಆದರೆ ಈಗಿನ ಪರಿಷ್ಕರಣೆಯಿಂದ 10 ರಿಂದ 12 ಕೋಟಿ ಮತದಾರರು ಪಟ್ಟಿಯಿಂದ ಹೊರ ಹೋಗುತ್ತಾರೆ. ಎಸ್.ಐ.ಆರ್.ಹೆಸರಿನಲ್ಲಿ ಅಲ್ಪಸಂಖ್ಯಾತರು, ಬಡವರು, ದಲಿತರಿಗೆ ಅನ್ಯಾಯವಾಗುತ್ತದೆ. ಹುಡುಕಿ ಹುಡುಕಿ ಕೆಲವರನ್ನು ಚುನಾವಣೆ ಪ್ರಕ್ರಿಯೆಯಿಂದ ಹೊರ ಹಾಕುವುದು ಎಷ್ಟು ಸರಿ ಎಂದು ಕಿಡಿ ಕಾರಿದರು.

 

ಎಸ್.ಐ.ಆರ್.ನಿಂದ ಸಣ್ಣ ಪುಟ್ಟ ಕಾರಣಗಳಿಗಾಗಿ ಅರ್ಹ ಮತದಾರರು ಪಟ್ಟಿಯಿಂದ ಹೊರ ಹೋಗುತ್ತಾರೆ. ಸಂವಿಧಾನ ಪ್ರತಿಯೊಬ್ಬ ಪ್ರಜೆಗೂ ಮತದಾನದ ಹಕ್ಕು ನೀಡಿರುವಾಗ ಮತ ಪರಿಷ್ಕರಣೆ ಹೆಸರಿನಲ್ಲಿ ಮತದಾನವನ್ನು ಕಸಿದುಕೊಳ್ಳುವುದಾದರೆ ಪ್ರಜಾಪ್ರಭುತ್ವ ಉಳಿಯುವುದಾದರೂ ಹೇಗೆ? ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದು ಘನಘೋರ ಅಪರಾಧ. ಇದೊಂದು ಆತಂಕ, ಕ್ರೌರ್ಯ. ದೇಶದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಸುಪ್ರೀಂಕೋರ್ಟ್ ಇದನ್ನು ಗಂಭೀರವಾಗಿ ಪರಿಗಣಿಸಿ ಮರು ತೀರ್ಪು ನೀಡುವುದು ಸರಿ ಎಂದು ಮನವಿ ಮಾಡಿದರು.

 

ಕಟ್ಟ ಕಡೆಯ ಮನುಷ್ಯನೂ ಮತದಾನದ ಹಕ್ಕು ಚಲಾಯಿಸುವಂತ ನ್ಯಾಯ ಕೊಡಿಸುವುದು ಆಳುವ ಸರ್ಕಾರಗಳ ಧ್ಯೇಯವಾಗಬೇಕು. ಎಸ್.ಐ.ಆರ್.ಹೆಸರಿನಲ್ಲಿ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗೆ ದಬ್ಬಬೇಡಿ. ಅರಾಜಕತೆ ಸೃಷ್ಠಿಯಾಗುತ್ತದೆ. ಅದಕ್ಕಾಗಿ ಮೇ. 30 ರಂದು ಬೆಳಿಗ್ಗೆ 11 ರಿಂದ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

 

ನಿವೃತ್ತ ಪ್ರಾಚಾರ್ಯರಾದ ಶಿವಕುಮಾರ್ ಮಾತನಾಡಿ ಮತಪಟ್ಟಿಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಿ ಪಟ್ಟಿಯಲ್ಲಿರುವವರಿಗೆ ಮತದಾನದ ಹಕ್ಕು ನೀಡುವುದು ಚುನಾವಣಾ ಆಯೋಗದ ಉದ್ದೇಶವಾಗಬೇಕು. ಈಗಿನ ಎಸ್.ಐ.ಆರ್.ಜನದ್ರೋಹಿ ರೀತಿ ರೂಪಾಂತರಗೊಂಡು ಸಮಸ್ಯೆಗಳನ್ನು ಹುಟ್ಟುಹಾಕುತ್ತಿದೆ. ಮತ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಚುನಾವಣಾ ಆಯೋಗಕ್ಕೆ ಅಧಿಕಾರವಿದೆ ಎಂದು ಸುಪ್ರೀಂಕೋರ್ಟ್ ಹೇಳಿರುವುದನ್ನು ಮತ್ತೊಮ್ಮೆ ಪರಾಮರ್ಶಿಸುವುದು ಒಳ್ಳೆಯದು ಎಂದು ಹೇಳಿದರು.

 

ಜನಶಕ್ತಿ ರಾಜ್ಯ ಸಮಿತಿ ಸದಸ್ಯ ಟಿ.ಶಫಿವುಲ್ಲಾ ಮಾತನಾಡುತ್ತ ಭಾರತ ಹಳ್ಳಿಗಳ ನಾಡು. ಹಾಗಾಗಿ ಮತಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯಿಂದ ನಿಜವಾದ ಮತದಾರರು ಹೊರ ಹೋಗುತ್ತಿರುವುದರ ವಿರುದ್ದ ಜನರನ್ನು ಜಾಗೃತಿಗೊಳಿಸುವುದಕ್ಕಾಗಿ ಮೇ.30 ರಂದು ಪರಿಷ್ಕರಣೆಯನ್ನು ನಿಲ್ಲಿಸುವಂತೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

 

ರವಿಕುಮಾರ್ ಮಾತನಾಡಿ ಪ್ರತಿ ಹತ್ತು ವರ್ಷಗಳಿಗೊಮ್ಮೆ ಕೇಂದ್ರ ಚುನಾವಣಾ ಆಯೋಗ ಮತಪಟ್ಟಿಯ ಪರಿಷ್ಕರಣೆ ಮಾಡುತ್ತದೆ. ಕೇಂದ್ರ ಸರ್ಕಾರ ಉದ್ದೇಶ ಪೂರಿತವಾಗಿ ಎಸ್.ಐ.ಆರ್.ಮೂಲಕ ಮತ ಪಟ್ಟಿ ಪರಿಷ್ಕರಣೆಗೆ ಮುಂದಾಗಿ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಏಕಾಏಕಿ ಪರಿಷ್ಕಣೆ ನಡೆಸುವ ಬದಲು ಸಮಯ ನೀಡಿ ಸರಿಪಡಿಸಿಕೊಳ್ಳಲು ಮತದಾರರಿಗೆ ಅವಕಾಶ ಕೊಡಬೇಕು. ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ಬೆಂಬಲವಾಗಿ ಕೆಲಸ ಮಾಡುವುದು ಸರಿಯಲ್ಲ ಎಂದರು. ರೈತ ಮುಖಂಡ ಧನಂಜಯ ಹಂಪಯ್ಯನಮಾಳಿಗೆ ಪತ್ರಿಕಾಗೋಷ್ಠಿಯಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now