Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೇವೇಗೌಡರ ಆರೋಗ್ಯ ಈಗ ಹೇಗಿದೆ..? ಕುಮಾರಸ್ವಾಮಿಯಿಂದ ಸ್ಪಷ್ಟನೆ

---Advertisement---

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಅನಾರೋಗ್ಯದ ಕಾರಣದಿಂದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗ ಅವರ ಆರೋಗ್ಯ ಹೇಗಿದೆ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ. ಈ ಸಂಬಂಧ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ.

ದೇವೇಗೌಡ ಅವರನ್ನು ನೋಡುವುದಕ್ಕೆ ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾತನಾಡಿದ ಕುಮಾರಸ್ವಾಮಿ ಅವರು, ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇನ್ನು ಮೂರ್ನಾಲ್ಕು ದಿನದಲ್ಲಿ ಅವರು ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ದೇವರ ಆಶೀರ್ವಾದದಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವೈದ್ಯರ ಚಿಕಿತ್ಸೆ ಗೌಡರ ಆರೋಗ್ಯ ಸಮಸ್ಯೆಗಳು ಪರಿಹಾರವಾಗಿದೆ. ಅಭಿಮಾನಿಗಳು ಕಾರ್ಯಕರ್ತರು ಆತಂಕಪಡುವ ಅವಶ್ಯಕತೆ ಇಲ್ಲ. ಇನ್ನೊಂದು ಮೂರ್ನಾಲ್ಕು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ತಂದೆಯವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.

ಚಳಿ, ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ ನಿಂದ ಬಳಲುತ್ತಿದ್ದು, ಮಣಿಪಾಲ್ ಆಸ್ಪತ್ರೆಗೆ ಸೇರಿದ್ದಾರೆ. ಸದ್ಯಕ್ಕೆ ಅವರ ಆರೋಗ್ಯ ಚೇತರಿಕೆ ಕಾಣುತ್ತಿದೆ. ದೇವೇಗೌಡ ಅವರು ದಾಖಲಾಗುತ್ತಿದ್ದಂತೆ ಪುತ್ರ ಮಾಜಿ ಸಚಿವ ಹೆಚ್ ಡಿ ರೇವಣ್ಣ ಆಸ್ಪತ್ರೆಗೆ ದೌಡಾಯಿಸಿದ್ದರು. ತಂದೆಯ ಆರೋಗ್ಯ ವಿಚಾರಿಸಿ ಮಾಧ್ಯಮಗಳಿಗೆ ಯಾವುದೇ ಮಾಹಿತಿ ನೀಡದೆ ಹಿಂದುರಿಗಿಸಿದ್ದರು. ನಂತರ ಆಪ್ತರಿಂದ ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಎಂದು ಸಂದೇಶ ರವಾನಿಸಿದ್ದರು. ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರು ಅನಾರೋಗ್ಯಕ್ಕೀಡಾಗಿ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರ ಚಿಕಿತ್ಸೆಗೆ ಸ್ಪಂದಿಸಿದ್ದು, ಚೇತರಿಕೆ ಕಂಡಿದ್ದಾರೆ. ಇನ್ನು ಮೂರು ದಿನಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now