Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತುರ್ತು ಬ್ರೈನ್ ಸರ್ಜರಿಗೆ ಒಳಗಾದ ಸದ್ಗುರು ಆರೋಗ್ಯ ಈಗ ಹೇಗಿದೆ..?

---Advertisement---

ಆಧ್ಯಾತ್ಮಿಕ ಗುರು ಜಗ್ಗಿ ವಾಸುದೇವ ಅವರು ಬ್ರೈನ್ ಸಮಸ್ಯೆಯಿಂದ ಬಳಲುತ್ತಿದ್ದರು. ಆ ಸಂಬಂಧ ಅವರಿಗೆ ಶಸ್ತ್ರ ಚಿಕಿತ್ಸೆಯನ್ನು ಮಾಡಲಾಗಿದೆ. ಸದ್ಯ ಅಪೋಲೋ ಆಸ್ಪತ್ರೆಯಲ್ಲಿಯೇ ಇನ್ನು ವಿಶ್ರಾಂತಿ ಪಡೆಯುತ್ತಿದ್ದಾರೆ. ಚಿಕಿತ್ಸೆಯ ಬಳಿಕ, ತಾನೂ ಆರೋಗ್ಯವಾಗಿರುವುದಾಗಿ ಸದ್ಗುರು ಅವರು ವಿಡಿಯೋ ಒಂದನ್ನು ಬಿಟ್ಟಿದ್ದರು. ಇದೀಗ ಮತ್ತೊಂದು ವಿಡಿಯೋವನ್ನು ಬಿಟ್ಟು, ಅಭಿಮಾನಿಗಳ ಆತಂಕವನ್ನು ದೂರ ಮಾಡಿದ್ದಾರೆ.

 

ಹೊಸ ವಿಡಿಯೋದಲ್ಲಿ ತಾವೂ ಆಸ್ಪತ್ರೆಯ ಬೆಡ್ ಮೇಲೆ ಕುಳಿತು ಪೇಪರ್ ಓದುತ್ತಿರುವ ವಿಡಿಯೋ ಹಂಚಿಕೊಂಡಿದ್ದಾರೆ‌. ತಲೆಗೆ ಹಾಕಿರುವ ಸ್ಟಿಚ್ ಬ್ಯಾಂಡೇಜ್ ಹಾಗೇಯೇ ಇದೆ. ದಿನೇ ದಿನೇ ಸದ್ಗುರು ಅವರು ಚೇತರಿಸಿಕೊಳ್ಳುತ್ತಿದ್ದು, ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ಸದ್ಗುರು ಅವರಿಗೆ ಅನಾರೋಗ್ಯವಾಗಿದೆ, ಅವರು ಆಸ್ಪತ್ರೆಗೆ ಅಡ್ಮಿಟ್ ಆಗಿದ್ದಾರೆ ಎಂಬುದು ಅಭಿಮಾನಿಗಳಿಗೆ ಗೊತ್ತಾಗಿದ್ದೆ ತಡ, ಅಭಿಮಾನಿಗಳು, ಬೆಂಬಲಿಗರು ಸಾಕಷ್ಟು ಆತಂಕಕ್ಕೆ ಒಳಗಾಗಿದ್ದರು. ಹಾಗೇ ದೇವರಿಗೆಲ್ಲಾ ಪೂಜೆ ಪುನಸ್ಕಾರ ಮಾಡುವುದಕ್ಕೆ ಶುರು ಮಾಡಿದ್ದರು. ಆ ಬಳಿಕ ಸದ್ಗುರು ಅವರು ವಿಡಿಯೋ ಬಿಟ್ಟ ಬಳಿಕ ಸಮಾಧಾನಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment