ಬೆಂಗಳೂರು: ಮಾಜಿ ಸಿಎಂ ಎಸ್ ಎಂ ಕೃಷ್ಣ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅವರ ಆರೋಗ್ಯದ ಸ್ಥಿತಿ ಬಗ್ಗೆ ಹಲವು ವಿಚಾರಗಳು ಹರಿದಾಡುತ್ತಿದ್ದು, ಎಸ್ಎಂಕೆ ನಿವಾಸದಿಂದಲೇ ಆ ಬಗ್ಗೆ ಸಂದೇಶವೊಂದು ಬಂದಿದೆ.
ಡಾ. ಸತ್ಯನಾರಾಯಣ್ ಹಾಗೂ ಡಾ. ಸುನಿಲ್ ಕಾರಂತ್ ಅವರ ನೇತೃತ್ವದಲ್ಲಿ ಎಸ್ ಎಂ ಕೃಷ್ಣ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುನಲ್ಲಿದ್ದು, ಅವರ ಸ್ಥಿತಿ ಸುಧಾರಿಸಿದೆ. ಯಾರೂ ಕೂಡ ಭಯಪಡಿವ ಅಗತ್ಯವಿಲ್ಲ. ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಎಸ್ ಎಂ ಕೃಷ್ಣ ನಿವಾಸದಿಂದಾನೇ ಅಧಿಕೃತ ಸಂದೇಶ ಬಂದಿದೆ.
ಇನ್ನು ಸಚಿವ ಡಾ. ಸುಧಾಕರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಎಸ್ ಎಂ ಕೃಷ್ಣ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಜೊತೆ ಸಂಪರ್ಕದಲ್ಲಿದ್ದು, ಅವರ ಆರೋಗ್ಯದ ಬಗ್ಗೆ ಕ್ಷಣಕ್ಷಣಕ್ಕೂ ಮಾಹಿತಿ ಪಡೆಯುತ್ತಿದ್ದಾರೆ. ಎಸ್ ಎಂ ಕೃಷ್ಣ ಅವರಿಗೆ ನಿನ್ನೆ ರಾತ್ರಿ ಜ್ವರ ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಿ, ಕೋವಿಡ್ ಟೆಸ್ಟ್ ಕೂಡ ಮಾಡಿದ್ದಾರೆ. ಹೀಗಾಗಿ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.