Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಕರ್ನಾಟಕ ಬಂದ್ ಗೆ ತಯಾರಿ ಹೇಗಿದೆ..?

---Advertisement---

ಬೆಂಗಳೂರು: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಬಿಡುವುದನ್ನು ವಿರೋಧಿಸಿ ಈಗಾಗಲೇ ಬೆಂಗಳೂರು ಬಂದ್ ಅನ್ನು ಯಶಸ್ವಿಯಾಗಿ ಮಾಡಲಾಗಿದೆ. ಇದೀಗ ನಾಳೆ ಕರ್ನಾಟಕ ಬಂದ್ ಮಾಡುವುದಕ್ಕೆ ಎಲ್ಲಾ ತಯಾರಿ ನಡೆದಿದೆ. ಕನ್ನಡ ಪರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿವೆ.

ನಾಳಿನ ಕರ್ನಾಟಕ ಬಂದ್ ನಲ್ಲಿ ಅಗತ್ಯ ಸೇವೆಗಳನ್ನು ಹೊರತು ಪಡಿಸಿ, ಇನ್ನುಳಿದ ಸೇವೆಗಳು ಸಿಗುವುದಿ ಅಮಾನವಾಗಿದೆ‌. ಕರ್ನಾಟಕ ಬಂದ್ ಗೆ ನೂರಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿವೆ. ಓಲಾ-ಉಬರ್ ಕೂಡ ಬೆಂಬಲ ಸೂಚಿಸಿದ್ದು, ವಾಹನಗಳ ಸಂಚಾರವೂ ಇರುವುದಿಲ್ಲ.

ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ತನಕ ಬಂದ್ ಇರಲಿದೆ. ಕನ್ನಡಪರ ಸಂಘಟನೆಗಳಿಂದ ಟೌನ್ ಹಾಲ್ ನಿಂದ ಹಿಡಿದು ಫ್ರೀಡಂ ಪಾರ್ಕ್ ತನಕ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ನಾರಾಯಣಗೌಡ ನೇತೃತ್ವ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದಿಂದ ಬೃಹತ್ ಮೆರವಣಿಗೆ ನಡೆಯಲಿದೆ‌.

ಇನ್ನು ಕನ್ನಡ ಪರ ಹೋರಾಟಗಾರರು ಹೆದ್ದಾರಿಗಳನ್ನು ತಡೆದು, ಟೋಲ್ ಗಳಿಗೆ, ರೈಲು ನಿಲ್ದಾಣಗಳಿಗೆ, ವಿಮಾನ ನಿಲ್ದಾಣಗಳಿಗೆ ಮುತ್ತಿಗೆ ಹಾಕಲಿದ್ದಾರೆ. ಬೀದರ್ ನಿಂದ ಚಾಮರಾಜನಗರ, ಕೋಲಾರದಿಂದ ಮಂಗಳೂರಿನವರೆಗೂ ಬಂದ್ ಗೆ ವ್ಯಾಪಕ ಬೆಂಬಲ ಸಿಕ್ಕಿದೆ. ಚಿತ್ರಮಂದಿರಗಳು, ಓಲಾ-ಉಬರ್, ಆಟೋ, ಖಾಸಗಿ ಬಸ್ ಗಳು, ಮಾಲ್ ಗಳು ಇರುವುದಿಲ್ಲ. ಕೆಎಸ್ಆರ್ಟಿಸಿ ಬಸ್, ಬಿಎಂಟಿಸಿ ಬಸ್ ಸೇರಿದಂತೆ ನಾಲ್ಕು ನಿಗಮಗಳಿಂದ ಬಂದ್ ಬೆಂಬಲ ನೀಡುವ ಬಗ್ಗೆ ಇನ್ನು ನಿರ್ಧಾರವಾಗಿಲ್ಲ. ಹೀಗಾಗಿ ನಾಳಿನ ಕರ್ನಾಟಕ ಬಂದ್ ನಲ್ಲಿ ಸರ್ಕಾರಿ ಬಸ್ ಗಳ ಸಂಚಾರ ಇರಬಹುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment