ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತಷ್ಟು ಚುರುಕುಗೊಂಡಿದೆ. ಕರಾವಳಿ ಒಳನಾಡಿನಲ್ಲಿ ಜೋರು ಮಳೆ ಆಗುವ ಸಾಧ್ಯತೆ ಇದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಸಂಪರ್ಕ ಸೇತುವೆಗಳು ಮುಳುಗಡೆಯಾಗಿದೆ.
ದಕ್ಷಿಣ ಕನ್ನಡದಲ್ಲೂ ಧಾರಾಕಾರ ಮಳೆಯಾಗುತ್ತಿದೆ. ಅಪಾಯದ ಮಟ್ಟ ಮೀರಿ, ನೇತ್ರಾವತಿ ನದಿ ಹರಿಯುತ್ತಿದೆ. ಧರ್ಮಸ್ಥಳ ಸ್ನಾನಘಟ್ಟ ಮುಳುಗಡೆ ಭೀತಿಯಲ್ಲಿ ಇದೆ. ದೇವಸ್ಥಾನದ ಆಡಳಿತ ಮಂಡಳಿಯೂ ಈ ಕುರಿತು ಎಚ್ಚರಿಕೆ ನೀಡಿದೆ.
ಧರ್ಮಸ್ಥಳ ಅಂದ್ರೇನೆ ಭಕ್ತರು ಜಾಸ್ತಿ. ಸದಾ ಭಕ್ತರಿಂದ ತುಂಬಿ ತುಳುಕುತ್ತಿರುವ ಕ್ಷೇತ್ರ. ರಜೆ ಸಿಕ್ತು ಅಂದ್ರೆ ಮೊದಲು ಧರ್ಮಸ್ಥಳಕ್ಕೆ ಪ್ಲ್ಯಾನ್ ಮಾಡಲಾಗುತ್ತದೆ. ವಾರಾಂತ್ಯ ಹಿನ್ನೆಲೆ ಧರ್ಮಸ್ಥಳದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಮಳೆಯಿಂದಾಗಿ ಎಚ್ಚರಿಸಿದರೂ ಕೂಡ ಬಂದಿರುವ ಭಕ್ತರು ನದಿಗೆ ಇಳಿಯುತ್ತಿರುವ ಇಳಿಯುತ್ತಿದ್ದಾರೆ.