ನಟ ಉಪೇಂದ್ರ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂಲಗಳ ಪ್ರಕಾರ ಶೂಟಿಂಗ್ ಸಮಯದಲ್ಲಿ ಧೂಳು ಇದ್ದಿದ್ದರಿಂದ ಉಸಿರಾಟದ ಸಮಸ್ಯೆ ಆಗಿದೆ ಎನ್ನಲಾಗಿದೆ. ತಕ್ಷಣ ಅವರನ್ನು ನೆಲಮಂಗಲದಲ್ಲಿದ್ದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿದ್ದಾರೆ.
ಉಪೇಂದ್ರ ಅವರಿಗೆ ದಿಢೀರ್ ಆರೋಗ್ಯ ಸಮಸ್ಯೆ ಕಾಡಿದ್ದಕ್ಕೆ ಅಭಿಮಾನಿಗಳೆಲ್ಲಾ ಒಂದು ಕ್ಷಣ ಶಾಕ್ ಆಗಿದ್ದರು. ಅವರ ಆರೋಗ್ಯದ ಅಪ್ಡೇಟ್ ತಿಳಿಯಲು ತಡಕಾಡಿದರು. ಇದೀಗ ಸ್ವತಃ ಉಪೇಂದ್ರ ಅವರೇ ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ನಾನು ಆರೋಗ್ಯವಾಗಿದ್ದೇನೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ವಿಡಿಯೋವೊಂದನ್ನು ಮಾಡಿದ್ದು, ನನಗೆ ಏನು ಆಗಿಲ್ಲ. ನಾನೀಗ ಆರಾಮವಾಗಿದ್ದೀನಿ ಎಂದಿದ್ದಾರೆ. ಬಹಳ ಬೇಗ ಚೇತರಿಸಿಕೊಂಡಿದ್ದು, ಮತ್ತೆ ಶೂಟಿಂಗ್ ನಲ್ಲೂ ಉಪೇಂದ್ರ ಅವರು ಪಾಲ್ಗೊಂಡಿದ್ದಾರೆ. ಶೂಟಿಂಗ್ ಸ್ಪಾಟ್ ಗೆ ಹೋಗುವಾಗಲೇ ಈ ವಿಡಿಯೋ ಮಾಡಿದ್ದಾರೆ.
ನನಗೆ ಏನು ಆಗಿಲ್ಲ. ನಾನು ಶೂಟಿಂಗ್ ಸ್ಪಾಟ್ ಗೆ ಹಿಂತಿರುಗುತ್ತಿದ್ದೇನೆ. ನೋಡಿ ಅಂತ ಶೂಟಿಂಗ್ ಸ್ಪಾಟ್ ಕೂಡ ತೋರಿಸಿದ್ದಾರೆ. ಥ್ರಿಲ್ಲರ್ ಮಂಜು ಅವರನ್ನು ಸಹ ವಿಡಿಯೋ ಮೂಲಕ ತೋರಿಸಿದ್ದಾರೆ. ಈ ವಿಡಿಯೋ ನೋಡಿದ ಅಭಿಮಾನಿಗಳು ಸದ್ಯ ನಿಟ್ಟುಸಿರು ಬಿಟ್ಟಿದ್ದಾರೆ. ಹೀಗೆ ಆರೋಗ್ಯವಾಗಿರಿ ಎಂದು ಹಾರೈಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…