ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಾ ಇದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿದ್ದರು. ಆದರೆ ಈಗ ಬಿಜೆಪಿ ವಿರೋಧ ಪಕ್ಷದಲ್ಲಿದ್ದರೂ ನಾಯಕ ಮಾತ್ರ ಇನ್ನೂ ಆಯ್ಕೆಯಾಗಿಲ್ಲ. ಈ ಬಗ್ಗೆ ಕಾಂಗ್ರೆಸ್ ಆಗಾಗ ಚಾಟಿ ಬೀಸುತ್ತಲೇ ಇರುತ್ತದೆ. ಇದೀಗ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಈ ಸಂಬಂಧ ಉತ್ತರಿಸಿದ್ದಾರೆ.
ಮುಂದಿನ ಮೂರು ದಿನಗಳಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲಾಗುತ್ತದೆ. ಪಕ್ಷವೂ ಈ ಬಗ್ಗೆ ತೀರ್ಮಾನ ಮಾಡುತ್ತದೆ. ಇಷ್ಟೊತ್ತಿಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಬೇಕಿತ್ತು. ಆದರೆ ನಮ್ಮ ನಾಯಕರು ಒಡಿಶಾ ರೈಲು ದುರಂತದ ಕಡೆ ಗಮನಹರಿಸಿದ್ದರು ಎಂದಿದ್ದಾರೆ.
ಬಿಜೆಪಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರೋಧ ಪಕ್ಷದ ನಾಯಕ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಜೊತೆಗೆ ಕೆಲವೊಂದು ವಿಚಾರವಾಗಿ ಜೋರು ಧ್ವನಿ ಎತ್ತುತ್ತಾರೆ. ಅಷ್ಟೇ ಅಲ್ಲ ತಮ್ಮ ನಾಯಕರ ವಿರುದ್ಧವೇ ಹೆಚ್ಚು ತಿರುಗಿ ಬೀಳುತ್ತಾರೆ. ಹೀಗಾಗಿ ಪ್ರತಿಪಕ್ಷ ನಾಯಕನ ಸ್ಥಾನ ನೀಡಿದರೆ ಅಚ್ಚುಕಟ್ಟಾಗಿ ನಿಭಾಯಿಸುತ್ತೀನಿ ಅನ್ನೋ ಭರವಸೆ ಅವರದ್ದು.