Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ, ದಾವಣಗೆರೆ ಸೇರಿ ಹಲವೆಡೆ ಇನ್ನೂ ಎಷ್ಟು ದಿನ ಸುರಿಯಲಿದೆ ಮಳೆ…!

---Advertisement---

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿರುವ ಕಾರಣ ಕರ್ನಾಟಕ ರಾಜ್ಯದಲ್ಲೂ ಮಳೆಯ ಪ್ರಭಾವ ಜೋರಾಗಿದೆ. ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆಯಿಂದ ಆಗಸ್ಟ್ 19ರವರೆಗೂ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.

ಬೆಂಗಳೂರಿನಲ್ಲಂತು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಮನೆ ಮಾಡಿದೆ. ಮಧ್ಯಾಹ್ನದಿಂದಲೂ ಜೋರು ಮಳೆಯಾಗುತ್ತಿದೆ. ಪ್ರಮುಖ ರಸ್ತೆಗಳಲ್ಲಿ ಮಳೆಯಿಂದಾಗಿ ಸಂಪರ್ಕಕ್ಕೆ ಸಮಸ್ಯೆಯಾಗಿದೆ. ದ್ವಿಚಕ್ರ ವಾಹನ ಸವಾರರಿಗಂತು ಇನ್ನಿಲ್ಲದ ತೊಂದರೆಯಾಗಿತ್ತು. ಮಳೆ ನಿಲ್ಲುವ ತನಲ ಅವರು ನಿಂತುಕೊಂಡೆ ಮುಂದೆ ಸಾಗಿದ್ದಾರೆ.

ಉಳಿದಂತೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಿಗೆ ಆ.15 ರಿಂದ 19ರವರೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

 

ಆಗಸ್ಟ್ ತಿಂಗಳಲ್ಲಿ ಶೇಕಡ 50ರಷ್ಟು ಮಳೆ ಮಾತ್ರ ಆಗಲಿದೆ ಎಂದಹ ಹವಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ರೈತರು ಸಹಜವಾಗಿಯೇ ಆತಂಕಕ್ಕೀಡಾಗಿದ್ದಾರೆ. ಈ ಸಮಯದಲ್ಲಿಯೇ ಒಂದಷ್ಟು ಬೆಳೆಗಳನ್ನ ಬೆಳೆಯಲಾಗುತ್ತದೆ. ಆದರೆ ಈ ಸಮಯದಲ್ಲಿ ಮಳೆ ಕೈಕೊಟ್ಟರೆ ಬೆಳೆಯ ಕಥೆ ಏನು ಎಂಬ ಚಿಂತೆಯಾಗಿದೆ. ಸದ್ಯಕ್ಕೆ ಎಲ್ಲಾ ಕಡೆ ಮಳೆಯಾಗುತ್ತಿದೆ. ನೆಮ್ಮದಿಯಾಗಿದ್ದಾರೆ. ಜೊತೆಗೆ ರಾಜ್ಯದ ಸಾಕಷ್ಟಹ ಜಲಾಶಯದಲ್ಲಿ ನೀರು ಶೇಖರಣೆಯಾಗಿದೆ‌.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...