Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆಯಾಗಲಿದೆ : ಹವಮಾನ ಇಲಾಖೆ ಹೇಳಿದ್ದೇನು..?

---Advertisement---

ಬೆಂಗಳೂರು; ರಾಜ್ಯದೆಲ್ಲೆಡೆ ಈಗಾಗಲೇ ಮಳೆ ಶುರುವಾಗಿದೆ. ಮುಂಗಾರು ಆರಂಭಕ್ಕೂ ಮೊದಲೇ ಮುಂಗಾರು ಶುರುವಾಗಿದೆ. ಮುಂದಿನ ನಾಲ್ಕೈದು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುಡುಗು, ಮಿಂಚಿನ ಜೊತೆಗೆ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಅದರಲ್ಲೂ ಈ ನಾಲ್ಕೈದು ದಿನ ಬಹಳ ಮುಖ್ಯವಾಗಿ ಹೆದ್ದಾರಿಗಳಲ್ಲಿ ಮಳೆ ಸುರಿಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿಮ್ಮ ಗಮನಕ್ಕೂ ಬಂದಿರಬಹುದು. ಎಷ್ಟೋ ಸಲ ಒಂದು ಭಾಗದಲ್ಲಿ ಮಳೆ ಬಂದರೆ ಪಕ್ಕದ ರಸ್ತೆಯಲ್ಲಿಯೇ ಮಳೆ ಇರುವುದಿಲ್ಲ. ಇದು ಹಾಗೆ. ಕರ್ನಾಟಕದ ಅರ್ಧ ಭಾಗ ಅಂದರೆ ಬೆಂಗಳೂರು – ಹಾಸನ ಹೆದ್ದಾರಿ, ಬೆಂಗಳೂರು – ದಾವಣಗೆರೆ, ಶಿವಮೊಗ್ಗ – ಬೆಂಗಳೂರು ಹೈವೇ ಸೇರಿದಂತೆ ವಿವಿಧ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ತುಮಕೂರು, ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.

ಹುಬ್ಬಳ್ಳಿಯಿಂದ ಕಾರಾವಾರ ಹೋಗುವ ಹೆದ್ದಾರಿ ಹಾಗೂ ಹಾಸನ – ಮಂಗಳೂರಿಗೆ ತೆರಳುವ ಹೆದ್ದಾರಿಗಳಲ್ಲಿ ಹೆಚ್ಚಿನ ಮಳೆ ಆಗುವ ಸಾಧ್ಯತೆ ಇದೆ. ಕೆಲವೆಡೆ ಬಿಸಿಲಿ‌ನ ದರ್ಶನವಾದರೂ ಸಹಿತ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಅದರಲ್ಲೂ ಈ ಮಳೆಗೆ ಕೆಲವೆಡೆ ಗುಡ್ಡ ಕುಸಿತವಾಗುವಂತಹ ಸನ್ನಿವೇಶಗಳು ಕಾಣಿಸುತ್ತಿವೆ. ಹೀಗಾಗಿ ಇದು ವಾಹನ ಸವಾರರಿಗೆ, ಪ್ರವಾಸಕ್ಕೆಂದು ಈ ಸಮಯದಲ್ಲಿ ಹೋಗುವವರಿಗೆ ಎಚ್ಚರಿಕೆಯ ಸಂದೇಶ. ಕರ್ವ್ ಇರುವಂತ ಪ್ರದೇಶದಲ್ಲಿ ವಾಹನಗಳನ್ನು ಓಡಿಸುವಾಗ ತುಂಬಾನೇ ಎಚ್ಚರಿಕೆ ಇರಲಿ. ಗುಡ್ಡಗಳು ಈ ಮಳೆಯಿಂದಾಗಿ ಯಾವಾಗ, ಎಲ್ಲಿ ಕುಸಿಯುತ್ತದೆ ಗೊತ್ತಾಗಲ್ಲ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment