Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಷ್ಟು ಜನರನ್ನು ಜೈಲಿಗೆ ಹಾಕ್ತೀರಿ.. ಎಮರ್ಜೆನ್ಸಿ ಶೀಘ್ರದಲ್ಲಿಯೇ ಬರಬಹುದೇನೋ : ಬೊಮ್ಮಾಯಿ

---Advertisement---

 

ಬೆಳಗಾವಿ: ಆಡಳಿತ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ರೊಚ್ಚಿಗೆದ್ದಿದ್ದಾರೆ. ಆಕ್ರೋಶ ಹೊರಹಾಕಿದ್ದಾರೆ. ಈ ಸರ್ಕಾರಕ್ಕೆ ಅಧಿಕಾರದ ಅಮಲು ಬಂದಿದೆ. ಕರ್ನಾಟಕದಲ್ಲಿ ಅತಿ ಶೀಘ್ರದಲ್ಲಿಯೇ ಎಮರ್ಜೆನ್ಸಿ ಘೋಷಣೆಯಾಗುತ್ತದೆಯೋ ಏನೋ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕಿಡಿಕಾರಿದ್ದಾರೆ.

ಗೋಹತ್ಯೆ ನಿಷೇಧ ಕಾಯ್ದೆ, ಪಠ್ಯ ಪುಸ್ತಕ ಪರಿಷ್ಕರಣೆ, ಸರ್ಕಾರದ ವಿರುದ್ಧ ಮಾತನಾಡಿದರೆ ಜೈಲಿಗೆ ಹಾಕ್ತೀವಿ ಅಂತಾರೆ ಎಂಬ ಹೇಳಿಕೆಗೆ ಮಾತನಾಡಿದ ಅವರು, ಕೆಲ ಸಚಿವರ ಹೇಳಿಕೆಗಳನ್ನು ನೋಡಿದ್ರೆ ವಾಕ್ ಸ್ವಾತಂತ್ರ್ಯ ಮೊಟಕುಗೊಳಿಸುತ್ತಿದ್ದಾರೆ. ನಮ್ಮ ಅಭಿಪ್ರಾಯಕ್ಕೆ ಸಹಮತ ಇಲ್ಲದವರ ಧ್ವನಿ ಹತ್ತಿಕ್ಕುವ ಪ್ರವೃತ್ತಿ ನಡೆಸುತ್ತಿದ್ದಾರೆ.

ಅತೀ ಶೀಘ್ರದಲ್ಲಿಯೇ ಕರ್ನಾಟಕದಲ್ಲಿ ಎಮರ್ಜೆನ್ಸಿ ಬರುತ್ತದೋ ಏನೋ. ಅಧಿಕಾರಿಗಳಿಗೆ ಒಬ್ಬ ಮಂತ್ರಿ ಹೇಳಿದ್ದಾರೆ. ಕೆಲಸ‌ ಮಾಡದಿದ್ದರೆ ಚಾಕುವಿನಿಂದ ಹೊಡೆಯುತ್ತೇವೆಂದು. ಜನರು ನಿಮಗೆ ಅಧಿಕಾರ ಕೊಟ್ಟಿರುವುದು ಜನರ ಸೇವೆ ಮಾಡಲೆಂದು, ರಾಜ್ಯದ ಅಭಿವೃದ್ಧಿಗೆ, ಜನರ ಸೇವೆ ಮಾಡಲೆಂದು, ಆದರೆ ಈ ರೀತಿಯ ಅಧಿಕಾರ ದುರುಪಯೋಗ ಪಡಿಸಿಕೊಳ್ಳಲೆಂದು ನಿಮಗೆ ಅಧಿಕಾರ ನೀಡಿಲ್ಲ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...