Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನೀರಾವರಿ ಯೋಜನೆಗಳಿಗೆ ಸಿಕ್ಕಿದ್ದಿಷ್ಟು

---Advertisement---

ಬೆಂಗಳೂರು; 2025-26ನೇ ರಾಜ್ಯ ಬಜೆಟ್ ನಲ್ಲಿ ಸಿದ್ದರಾಮಯ್ಯ ಸರ್ಕಾರವೂ ನೀರಾವರಿ ಯೋಜನೆಗೆ ಅನುದಾನ ಘೋಷಣೆ ಮಾಡಿದ್ದು, ಕರ್ನಾಟಕ ನೀರಾವರಿ (ತಿದ್ದುಪಡಿ) ವಿಧೇಯಕ 2024ನ್ನು ತಿದ್ದುಪಡಿ ಮಾಡಿ ಜಾರಿಗೊಳಿಸಲಾಗಿದೆ.

* ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ನೀರನ್ನು ಮೇಲೆತ್ತಿ ಗುರುತ್ವಾ ಕಾಲುವೆಯ ಸರಪಳಿ: 32.5 ಕಿ.ಮೀ ವರೆಗೆ ಹರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಎಲ್ಲಾ ಎಂಟು ವಿಯರ್‌ಗಳಲ್ಲಿ ಲಭ್ಯವಾಗುವ ನೀರನ್ನು ಗುರುತ್ವಾ ಕಾಲುವೆಯ
ಸರಪಳಿ: 241 ಕಿ.ಮೀ ವರೆಗೆ ಹರಿಸಲಾಗುವುದು. ಈ ಯೋಜನೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು.

* ಭದ್ರಾ ಮೇಲ್ದಂಡೆ ಯೋಜನೆಗೆ 2023-24ರ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ಘೋಷಿಸಿದ 5,300 ಕೋಟಿ ರೂ. ಅನುದಾನ ಇನ್ನೂ ಬಿಡುಗಡೆಯಾಗಿರುವುದಿಲ್ಲ. ಆದರೂ, ರಾಜ್ಯ ಸರ್ಕಾರವು ಅಗತ್ಯ ಅನುದಾನವನ್ನು ಒದಗಿಸಿ ಈ ಯೋಜನೆಯನ್ನು ಪೂರ್ಣಗೊಳಿಸಲು ಕ್ರಮವಹಿಸುತ್ತಿದೆ. ತರೀಕೆರೆ ಏತ ನೀರಾವರಿ ಯೋಜನೆಯಡಿ 79 ಕೆರೆಗಳನ್ನು ತುಂಬಿಸುವ ಮೂಲಕ
49,790 ಎಕರೆ ಸೂಕ್ಷ್ಮ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 2,611 ಕೋಟಿ ರೂ. ಅಂದಾಜು ಮೊತ್ತದ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ಹೊಸದುರ್ಗ, ಹೊಳಲ್ಕೆರೆ, ಜಗಳೂರು, ಮೊಳಕಾಲ್ಮೂರು, ಚಳ್ಳಕೆರೆ ಮತ್ತು ಪಾವಗಡ ತಾಲ್ಲೂಕುಗಳಲ್ಲಿನ 30 ಕೆರೆಗಳನ್ನು ತುಂಬಿಸಿ ಒಂದು ಲಕ್ಷದ ಎಪ್ಪತ್ತೇಳು ಸಾವಿರ ಎಕರೆ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸಾಮರ್ಥ್ಯವನ್ನು ಕಲ್ಪಿಸಲಾಗುವುದು.

* ಕೃಷ್ಣ ಮೇಲ್ದಂಡೆ ಯೋಜನೆ ಹಂತ-3ರ ವ್ಯಾಪ್ತಿಯ ಆಲಮಟ್ಟಿ ಅಣೆಕಟ್ಟಿನ ಗೇಟನ್ನು 524.256 ಮೀಟರ್‌ವರೆಗೆ ಎತ್ತರಿಸುವುದರಿಂದ ಮುಳುಗಡೆಯಾಗುವ ಜಮೀನುಗಳನ್ನು ಒಪ್ಪಂದ ಐತೀರ್ಪಿನ (Consent Award) ಮುಖಾಂತರ ಒಂದೇ ಹಂತದಲ್ಲಿ ಭೂಸ್ವಾಧೀನಪಡಿಸಿಕೊಂಡು ರೈತರಿಗೆ ಪರಿಹಾರ ವಿತರಣೆಗೆ ಕ್ರಮವಹಿಸಲಾಗುವುದು. ಅಲ್ಲದೇ, 2.01 ಲಕ್ಷ ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸುವ ಬಾಕಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಕ್ರಮವಹಿಸಲಾಗುವುದು.

* ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ
ಪೂರ್ವ ಸಿದ್ಧತಾ ಕಾರ್ಯ ಅಂತಿಮಗೊಂಡಿದ್ದು, ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರಗಳ ತೀರುವಳಿ ದೊರೆತ ಕೂಡಲೇ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು.

* ಕಳಸಾ-ಬಂಡೂರಾ ನಾಲಾ ತಿರುವು ಯೋಜನೆಯಡಿ 3.9 ಟಿಎಂಸಿ ನೀರಿನ ಬಳಕೆಗಾಗಿ ಕೇಂದ್ರ ಸರ್ಕಾರದಿಂದ ತೀರುವಳಿಗಳನ್ನು ನಿರೀಕ್ಷಿಸಿ ಈಗಾಗಲೇ ಯೋಜನಾ ಕಾಮಗಾರಿಗಳನ್ನು ಕೆಲವು ಷರತ್ತುಗಳೊಂದಿಗೆ ಗುತ್ತಿಗೆ ವಹಿಸಲಾಗಿದೆ. ಕೇಂದ್ರ ಸರ್ಕಾರದ ಅನುಮೋದನೆ ದೊರೆತ ಕೂಡಲೇ ಕಾಮಗಾರಿಗಳನ್ನು ಪ್ರಾರಂಭ.

* ಕೃಷ್ಣಾ ಕಣಿವೆ, ಕಾವೇರಿ ಕಣಿವೆ ಹಾಗೂ ಇತರ ನದಿಗಳ ಕಣಿವೆಯ ವಿವಿಧ ಯೋಜನೆಗಳಡಿ ಬಾಕಿ ಇರುವ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲು ಕ್ರಮ.

* ಕೃಷ್ಣಾ ಕಣಿವೆಯ ಅನುಷ್ಠಾನ ಹಂತದಲ್ಲಿರುವ ಆಧುನೀಕರಣ ಹಾಗೂ ಏತ ನೀರಾವರಿ ಯೋಜನೆಗಳನ್ನು PMKSY – AIBP ಯೋಜನೆಯಡಿ ಕೇಂದ್ರ ಸರ್ಕಾರದ ಸಹಾಯಧನ ಪಡೆಯಲು ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಕೆ

* ಎತ್ತಿನಹೊಳೆಯ ಯೋಜನೆಯಿಂದ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ 45 ಕೆರೆಗಳನ್ನು ಹಾಗೂ ಕೊರಟಗೆರೆ ತಾಲ್ಲೂಕಿನ 62 ಕೆರೆಗಳನ್ನು ತುಂಬಿಸಿ ಅಂತರ್ಜಲ ಹೆಚ್ಚಿಸುವ ಯೋಜನೆಯನ್ನು 553 ಕೋಟಿ ರೂ. ಮೊತ್ತದಲ್ಲಿ ಅನುಷ್ಠಾನಗೊಳಿಸಲು ಕ್ರಮ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment