ಸಿದ್ದರಾಮಯ್ಯ ಸರ್ಕಾರ ಇಂದು ಅಕ್ಕಿ ಬದಲು ಹಣ ನೀಡಲು ನಿರ್ಧರಿಸಿದೆ. ಐದು ಕೆಜಿ ಅಕ್ಕಿ ಜೊತೆಗೆ ಐದು ಕೆಜಿ ಅಕ್ಕಿಯ ಹಣ ನೀಡಲಿದೆ. ಈ ಸಂಬಂಧ ಸಂಪುಟ ಸಭೆಯಲ್ಲಿ ಸಿದ್ದರಾಮಯ್ಯ ಪ್ರಸ್ತಾಪಕ್ಕೆ ಎಲ್ಲಾ ಸಚಿವರಿಂದ ಒಪ್ಪಿಗೆ ಸಿಕ್ಕಿದೆ.
ಅಕ್ಕಿ ಕೊರತೆ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಅಕ್ಕಿ ಬದಲು ಹಣ ನೀಡುವ ಸಾಧ್ಯತೆ ಇದೆ. ಒಬ್ಬರಿಗೆ ತಿಂಗಳಿಗೆ 170 ರೂಪಾಯಿ ಕೊಡಲು ನಿರ್ಧಾರ ಮಾಡಲಾಗಿದೆ. ಇನ್ನು ಇಬ್ಬರು ಇದ್ದರೆ 340, ಐದು ಸದಸ್ಯರಿಗೆ 850 ರೂಪಾಯಿ ಹಣವನ್ನು ಅಕೌಂಟ್ ಗೆ ಹಾಕಲಾಗುತ್ತದೆ. ಒಂದು ಕೆಜಿ ಅಕ್ಕಿಗೆ 34 ರೂಪಾಯಿಯಂತೆ ನೀಡಲಾಗುತ್ತಿದೆ.
ಕೇಂದ್ರದಿಂದ ಅಕ್ಕಿ ಕಾಲ ಡದೆ ಇದ್ದ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್, ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ಬಡವರ ವಿರೋಧಿ ಅನ್ನೋದು ಸಾಬೀತಾಗಿದೆ. ಬಿಜೆಪಿ ಉದ್ದೇಶಪೂರ್ವಕವಾಗಿಯೇ ರಾಜಕೀಯ ಮಾಡಿದೆ. ಸದ್ಯಕ್ಕೆ ನಾವು ಅಕ್ಕಿ ಬದಲು ಹಣ ಕೊಡುತ್ತೇವೆ. ಹಣ ಕೊಡುವ ವ್ಯವಸ್ಥೆ ಮಾಡುತ್ತೇವೆ ಎಂದು ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.