ಬೆಂಗಳೂರು: ಆರೋಗ್ಯ ಸಚಿವ ಸುಧಾಕರ್ ಕಾಂಗ್ರೆಸ್ ಮೇಲೆ ಕಿಡಿಕಾರಿದ್ದಾರೆ. ಕೊರೊನಾ ವಿಚಾರದಲ್ಲಿ ಸರ್ಕಾರಕ್ಕೆ ಸಹಕಾರ ನೀಡಬೇಕು. ಅದನ್ನ ಬಿಟ್ಟು ರಾಜಕೀಯ ಪ್ರಚಾರ ತೆಗೆದುಕೊಳ್ಳಬಾರದು ಎಂದು ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್, ಜವಾಬ್ದಾರಿಯುತ ಸ್ಥಾನದಲ್ಲಿರುವ ಕಾಂಗ್ರೆಸ್ ನಾಯಕರು ತಮ್ಮ ನಿರಾಧಾರ, ಸತ್ಯಕ್ಕೆ ದೂರವಾದ ಆರೋಪಗಳ ಮೂರನೇ ಅಲೆಯನ್ನು ಮುಂದುವರೆಸಿರುವುದು ವಿಷಾದಕರ. ಕರ್ನಾಟಕದಲ್ಲಿ ಕೋವಿಡ್ ಮರಣ ಪ್ರಮಾಣ ಕೇವಲ 1% ಇದ್ದು, ಮೂರನೇ ಅಲೆಯಲ್ಲಿ 1.9% ಜನ ಸೋಂಕಿತರು ಮಾತ್ರ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.
ಇದಕ್ಕೆ ಮುಖ್ಯ ಕಾರಣ ಲಸಿಕಾಕರಣ. ಪ್ರಧಾನಿ @narendramodi ಅವರ ನೇತೃತ್ವದ ಕೇಂದ್ರ ಸರ್ಕಾರದ ಸಹಕಾರದಿಂದ ರಾಜ್ಯದಲ್ಲಿ 18+ ವಯೋಮಾನದವರಿಗೆ 100% ಮೊದಲ ಡೋಸ್ ಪೂರೈಸಿದ್ದು, 87.6% ಜನರಿಗೆ ಎರಡೂ ಡೋಸ್ ನೀಡಲಾಗಿದೆ. ಆರೋಗ್ಯ ಹಾಗೂ ಮುಂಚೂಣಿ ಕಾರ್ಯಕತರು, ಹಿರಿಯ ನಾಗರೀಕರಲ್ಲಿ 51% ಫಲಾನುಭವಿಗಳಿಗೆ ಮುನ್ನೆಚ್ಚರಿಕೆ ಡೋಸ್ ನೀಡಲಾಗಿದೆ.
ಸಾಂಕ್ರಾಮಿಕದ ಸಂದರ್ಭದಲ್ಲಿ ಸರ್ಕಾರಕ್ಕೆ ಸಹಕಾರ ನೀಡುವುದು ಬಿಟ್ಟು ರಾಜಕೀಯ ಲಾಭ ಪಡೆಯಲು ವಿನಾಕಾರಣ ಟೀಕೆ ಮಾಡುವುದು ಎಷ್ಟು ಸರಿ. ಕೊರೊನಾ ಎಂಬುದೇ ಇಲ್ಲ, ಅದು ಬಿಜೆಪಿ ಸೃಷ್ಟಿ ಎನ್ನುವ ಅಧ್ಯಕ್ಷರು ಒಂದು ಕಡೆ, ಕೊರೊನಾ ನಿಯಂತ್ರಣದ ಬಗ್ಗೆ ಮಾತನಾಡುವ ಪ್ರತಿಪಕ್ಷ ನಾಯಕರು ಇನ್ನೊಂದು ಕಡೆ. ಇದರಲ್ಲಿ ಕಾಂಗ್ರೆಸ್ ಪಕ್ಷದ ನಿಲುವೇನು? ಎಂದು ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…