Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಈ ಬಾರಿಯ ಗಣೇಶ ಹಬ್ಬವನ್ನು ಹೇಗೆ ಆಚರಿಸಬೇಕು ? ಯಾವೆಲ್ಲಾ ನಿಯಮ ಪಾಲಿಸಬೇಕು ? ಮಾರ್ಗಸೂಚಿಯಲ್ಲೇನಿದೆ ? ಇಲ್ಲಿದೆ ಸಂಪೂರ್ಣ ಮಾಹಿತಿ…!

---Advertisement---

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, ಆ.31: ಸರ್ಕಾರ ಪಿಓಪಿ ಮತ್ತು ಲೋಹ ಮಿಶ್ರಿತ ಬಣ್ಣದ ಗಣಪತಿ ವಿಗ್ರಹಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಇವುಗಳ ವಿಸರ್ಜನೆಯಿಂದ ಜಲಮೂಲಗಳು ಮಲಿನವಾಗುತ್ತವೆ, ಹೀಗಾಗಿ ಸಾರ್ವಜನಿಕರು ಪರಿಸರ ಕಾಳಜಿಯೊಂದಿಗೆ ಗಣೇಶ ಹಬ್ಬವನ್ನು ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಿಸುವ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ  ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಿಷೇಧಿತ ಗಣಪತಿ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟ ಮಾಡುವುದನ್ನು ಪರಿಸರ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ತಡೆಗಟ್ಟಬೇಕು.  ನಿಷೇಧಿತ ಗಣೇಶ ಮೂರ್ತಿಗಳ ಮಾರಾಟದ ಬಗ್ಗೆ ಪರಿಸರ ಅಧಿಕಾರಿಗಳು ನಿಗಾ ವಹಿಸಬೇಕು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ವಿವಿಧ ಊರು ಹಾಗೂ ರಾಜ್ಯಗಳಿಂದ ಜಿಲ್ಲೆಗೆ ವಾಹನಗಳ ಮೂಲಕ ಪಿಓಪಿ ಗಣಪತಿ ವಿಗ್ರಹಗಳ ಸಾಗಾಣಿಕೆ ತಡೆಯಲು ಚೆಕ್ ಪೋಸ್ಟ್ ಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಬೇಕು.

ನಗರ, ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳು ಪಿಓಪಿ ಗಣಪತಿ ಮಾರಾಟ ಮಾಡುವ ಅಂಗಡಿಗಳಿಗೆ ಲೈಸೆನ್ಸ್ ನೀಡಬಾರದು.  ಅಕ್ರಮವಾಗಿ ನಿಷೇಧಿತ ಗಣಪತಿ ವಿಗ್ರಹಗಳ ಮಾರಾಟ ಕಂಡುಬಂದರೆ ತಕ್ಷಣವೇ ಅಂತಹ ಅಂಗಡಿಗಳ ಮೇಲೆ ದಾಳಿ ಮಾಡಿ ವಿಗ್ರಹಗಳನ್ನು ವಶಪಡಿಸಿಕೊಂಡು ಕೇಸು ದಾಖಲಿಸಬೇಕು, ಅಲ್ಲದೆ ಸುಪರ್ದಿಗೆ ಪಡೆದ ನಿಷೇಧಿತ ವಿಗ್ರಹಗಳನ್ನು ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಸಾಗಿಸಿ ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದರು.

ಸಾರ್ವಜನಿಕ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ :
ಸಾರ್ವಜನಿಕವಾಗಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಪ್ರತಿಯೊಬ್ಬರು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳು, ಪೊಲೀಸ್, ಬೆಸ್ಕಾಂ ಹಾಗೂ ಅಗ್ನಿಶಾಮಕ ಇಲಾಖೆಗಳಿಂದ ಅನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ.

ಅನುಮತಿ ನೀಡುವ ಸಂದರ್ಭದಲ್ಲಿ ನಿಷೇದಿತ ಪಿಒಪಿ ಹಾಗೂ  ಆಯಿಲ್ ಪೇಂಟಿಗ್ ಗಣೇಶ ಮೂರ್ತಿಗಳು, ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ನಿರ್ಬಂಧ ಹೇರಬೇಕು.  ರಾತ್ರಿ 10 ಗಂಟೆಯಿಂದ ಬೆಳಗಿನ 6 ಗಂಟೆಯ ವರೆಗೆ ಧ್ವನಿ ವರ್ಧಕಗಳ ಬಳಕೆ ನಿಷೇಧಿಸಬೇಕು. ಯಾವುದೇ ಕಾರಣಕ್ಕೂ ಕೋಮು ಸೌಹಾರ್ಧತೆಗೆ ಧಕ್ಕೆ ಬರದಂತೆ ನೋಡಿಕೊಳ್ಳಬೇಕು. ಪ್ರತಿಯೊಂದು ಹಂತದಲ್ಲೂ ಶಾಂತಿ ಸಭೆಗಳನ್ನು ಪೊಲೀಸ್ ಅಧಿಕಾರಿಗಳು ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ನಿಗಧಿತ ಸ್ಥಳದಲ್ಲಿ ಮೂರ್ತಿ ವಿಸರ್ಜನೆಗೆ ಅವಕಾಶ : ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳಲ್ಲಿ ಗಣೇಶ ಮೂರ್ತಿ ವಿಜಸರ್ಜನೆಗೆ  ಸ್ಥಳ ಗುರುತಿಸಬೇಕು. ಕೆರೆ, ಕಲ್ಯಾಣಿಗಳಲ್ಲಿ ನೇರವಾಗಿ ಮೂರ್ತಿಗಳನ್ನು ವಿಸರ್ಜಿಸಲು ಅವಕಾಶ ನೀಡಬೇಡಿ. ತಾತ್ಕಾಲಿಕವಾಗಿ ವಿಸರ್ಜನೆಗೆ ಪ್ರತ್ಯೇಕವಾಗಿ ಕೃತಕ ಟ್ಯಾಂಕ್‍ಗಳನ್ನು ನಿರ್ಮಿಸಬೇಕು.

ಸ್ಥಳದಲ್ಲಿ ಹೂವು, ಹಣ್ಣು, ಬಾಳೆಕಂಬ ಮಾವಿನ ತೋರಣ ಸೇರಿದಂತೆ ಇತರೆ ಹಸಿ ತ್ಯಾಜ್ಯಗಳನ್ನು ಸಂಗ್ರಹಿಸಲು ವ್ಯವಸ್ಥೆ ಕಲ್ಪಿಸಬೇಕು, ನೀರಿನಲ್ಲಿ ಮೂರ್ತಿಗಳೊಂದಿಗೆ ಇವುಗಳನ್ನು ವಿಸರ್ಜಿಸುವುದನ್ನು ತಡೆಗಟ್ಟಬೇಕು, ಗಣೇಶ ಹಬ್ಬದ ನಂತರ ಮೂರ್ತಿ ವಿಸರ್ಜಿಸುವ ದಿನಗಳಂದು ಸಂಚಾರಿ ಟ್ಯಾಂಕರ್ ಮೂಲಕ ನಗರದ ಓಣಿಗಳಿಗೆ ತೆರಳಿ ಮೂರ್ತಿ ವಿಸರ್ಜನೆಗೆ ಅವಕಾಶ ನೀಡಬೇಕು, ಈ ಬಗ್ಗೆ ನಗರ, ಸ್ಥಳೀಯ ಸಂಸ್ಥೆಗಳು ಸಾಕಷ್ಟು ಮೊದಲೇ ಪ್ರಚಾರ ನೀಡಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ನೀಡಿದರು.

ಸಭೆಯಲ್ಲಿ ಪೊಲೀಸ್ ಇನ್ಸ್‍ಪೆಕ್ಟರ್ ಟಿ.ಆರ್.ನಯಿಂ ಅಹಮದ್ ಸೇರಿದಂತೆ ಎಲ್ಲಾ ನಗರಸಭೆಯ ಪರಿಸರ ಅಭಿಯಂತರ ಜಾಫರ್, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...