ಐಪಿಎಲ್ 17ನೇ ಸೀಸನ್ ಗೆ ಕ್ಷಣಗಣನೆ ಶುರುವಾಗಿದೆ. ಮಾರ್ಚ್ 22ಕ್ಕೆ ಮ್ಯಾಚ್ ಆರಂಭವಾಗಲಿದೆ. ಮೊದಲ ಪಂದ್ಯವೇ ಆರ್ಸಿಬಿ ಹಾಗೂ ಸಿ ಎಸ್ ಕೆ ನಡುವೆ ನಡೆಯಲಿದೆ. ಈ ಪಂದ್ಯ ನೋಡಲು ಇಡೀ ಭಾರತದ ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಮೊದಲ ಪಂದ್ಯ ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆಯಲಿದೆ. ಆದರೆ ಪಂದ್ಯಕ್ಕೂ ಮೊದಲು ಅದ್ದೂರಿಯಾಗಿ ಉದ್ಘಾಟನಾ ಸಮಾರಂಭ ನಡೆಯಲಿದೆ.
ಉದ್ಘಾಟನಾ ಸಮಾರಂಭಕ್ಕೆ ಈಗಾಗಲೇ ಅದ್ದೂರಿಯಾಗಿ ಬಿಸಿಸಿಐ ಸಿದ್ಧತೆ ನಡೆಸಿಕೊಂಡಿದೆ. ಶುಕ್ರವಾರ ಸಂಜೆ 6.30ಕ್ಕೆ ಉದ್ಘಾಟನಾ ಸಮಾರಂಭ ಆರಂಭವಾಗಲಿದೆ. ಚಿದಂಬರಂ ಕ್ರೀಡಾಂಗಣದಲ್ಲಿಯೇ ಒಂದು ಗಂಟೆಗಳ ಕಾಲ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದ ನೇರ ಪ್ರಸಾರವನ್ನು ನೋಡಲು ಸ್ಟಾರ್ ಸ್ಪೋರ್ಟ್ಸ್ ವ್ಯವಸ್ಥೆ ಮಾಡಿದೆ. ಜಿಯೋ ಸಿನಿಮಾ ಆಪ್‌ನಲ್ಲೂ ನೇರವಾಗಿ ನೋಡಬಹುದಾಗಿದೆ. ಈ ಉದ್ಘಾಟನಾ ಸಮಾರಂಭಕ್ಕೆ ಬಾಲಿವುಡ್ ಸೆಲೆಬ್ರೆಟಿಗಳು ಆಗಮಿಸಲಿದ್ದಾರೆ. ಅಕ್ಷಯ್ ಕುಮಾರ್, ಟೈಗರ್ ಶ್ರಾಫ್, ಖ್ಯಾತ ಹಿನ್ನೆಲೆ ಗಾಯಕರಾದ ಎ ಆರ್ ರೆಹಮಾನ್, ಸೋನು ನಿಗಮ್ ಆಗಮಿಸುತ್ತಾರೆ. ಇನ್ನು ಮೊದಲ ದಿನದ ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಇನ್ನುಳಿದಂತೆ ಪ್ರತಿದಿನ ಸಂಜೆ 7.30ಕ್ಕೆ ಪಂದ್ಯಗಳು ಆರಂಭವಾಗಿತ್ತವೆ. ಉದ್ಘಾಟನಾ ಸಮಾರಂಭವಿರುವ ಕಾರಣ ಮೊದಲ ಪಂದ್ಯ ತಡವಾಗುತ್ತದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















